ಬೆಳಗಾವಿ : ಕನ್ನಡ ಸಮಾವೇಶದಲ್ಲಿ(Kannada samavesh) ನಾನು ಹೇಳಿದ್ದ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ, ಇದರಿಂದ ಗಡಿಭಾಗದ ಕನ್ನಡಿಗರ ಉತ್ಸಾಹಕ್ಕೆ ತಡೆ ಉಂಟುಮಾಡಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Laxmi hebbalkar) ಸ್ಪಷ್ಟನೆ ನೀಡಿದ್ದಾರೆ.
ಕಾರದಗಾದ ಕನ್ನಡ ಸಮಾವೇಷದಲ್ಲಿ ಭಾಗಿಯಾಗಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಭಾಷಣದಲ್ಲಿ ‘ ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು..’ ಎಂದು ಹೇಳಿಕೆ ನೀಡಿದ್ದಾರೆ ಎಂದು ಸುದ್ದಿಯಾಗಿತ್ತು.
ಈ ಬಗ್ಗೆ ಆಕ್ರೋಶ ಕೂಡ ವ್ಯಕ್ತವಾಗಿದ್ದು , ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಸಚಿವೆ ರಾಜಿನಾಮೆ ನೀಡಬೇಕಂದು ಆಗ್ರಹಿಸಿದ್ದರು. ಆದರೆ ಈ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದು ನನ್ನ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
‘ ಸಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮುಂಬೈ ಪ್ರಾಂತ್ಯದಲ್ಲಿ ಇತ್ತು , ಮೊದಲಿನಿಂದಲೂ ಕನ್ನಡಿಗರು ಮರಾಠಿಗಳು ಆತ್ಮೀಯವಾಗಿ ಬಾಳುತ್ತಿದ್ದರು, ಈ ಅನ್ಯೋನ್ಯತೆ ಮುಂದುವರೆಯಬೇಕು ಎಂದು ಹೇಳಿದ್ದೆ, ಮಹಾರಾಷ್ಟ್ರ ಎಂದು ಹೇಳಲು ಆಗ ಮಹಾರಾಷ್ಟ್ರ ರಾಜ್ಯವೇ ಅಸ್ಥಿತ್ವದಲ್ಲಿ ಇರಲಿಲ್ಲ ಹೀಗಾಗಿ ಅಂತಹ ಮಾತು ಹೇಳುವ ಪ್ರಶ್ನೆಯೇ ಬರುವುದಿಲ್ಲ’ ಎಂದು ಸಚಿವೆ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಕಾರದಗಾದ ಕನ್ನಡ ಸಮಾವೇಶಕ್ಕೆ ಮುಂದಿನ ವರ್ಷದಿಂದ ಸರ್ಕಾರದಿಂದ ಆರ್ಥಿಕ ಸಹಾಯ ಒದಗಿಸಿ ಅವರ ಉತ್ಸಾಹವನ್ನು ಹೆಚ್ಚಿಸುವ ಕಾರ್ಯ ಆಗಬೇಕಿದೆ ಎಂದು ಅವರು ಹೇಳಿದರು.
 Laxmi News 24×7
Laxmi News 24×7
				 
		 
						
					 
						
					 
						
					