Breaking News

ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ: ಅಭಿಮಾನಿಗಳ ಮನೆಗಳಿಗೆ ಯಶ್​ ಭೇಟಿ

Spread the love

ದಗ: ರಾಕಿಂಗ್ ಸ್ಟಾರ್ ಯಶ್ (Rocking star Yash) ಜನ್ಮದಿನದ ಹಿನ್ನೆಲೆಯಲ್ಲಿ ತಮ್ಮ ಊರಿನ ಬೀದಿಯಲ್ಲಿ ಬರ್ತಡೇ ಬ್ಯಾನರ್‍‌ ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಮೂವರು ಯುವಕರು ದುರ್ಮರಣಕ್ಕೀಡಾದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿತ್ತು.

ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಮೃತರ ಕುಟುಂಬಕ್ಕೆ 2 ಲಕ್ಷ ರೂ., ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ಕುರಿತಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸರಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದು, ಮೃತ ಕುಟುಂಬಸ್ಥರಿಗೆ 2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಮೃತರನ್ನು ಹನುಮಂತ ಹರಿಜನ(21), ಮುರುಳಿ ನಡುವಿನಮನಿ(20), ನವೀನ್ ಗಾಜಿ(19) ಎಂದು ಗುರುತಿಸಲಾಗಿದೆ.

ಇಂದು ಸಂಜೆ 4 ಗಂಟೆಗೆ ನಟ ಯಶ್ ಭೇಟಿ
ತಮ್ಮ ಹುಟ್ಟುಹಬ್ಬದಂದು ಅಭಿಮಾನಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಗ್ಗೆ ತಿಳಿದ ನಟ ಯಶ್ ಇಂದು ಸಂಜೆ 4 ಗಂಟೆಗೆ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಶೂಟಿಂಗ್ ನಿಮಿತ್ತ ವಿದೇಶಕ್ಕೆ ತೆರಳಿದ್ದ ಅವರು ಮೃತ ಅಭಿಮಾನಿಗಳ ಮನೆಗೆ ಭೇಟಿ ಕೊಟ್ಟು ಕುಟುಂಬಕ್ಕೆ ಧೈರ್ಯ ತುಂಬಲಿದ್ದಾರೆ ಎನ್ನಲಾಗಿದೆ. ಇಂದು 3 ಗಂಟೆಗೆ ಯಶ್ ಅವರು ಹುಬ್ಬಳ್ಳಿ ಏರ್ ಪೋರ್ಟ್ ರೀಚ್ ಆಗಲಿದ್ದು, ಹುಬ್ಬಳ್ಳಿಯಿಂದ ಲಕ್ಷ್ಮೀಶ್ವರಕ್ಕೆ ತಲುಪಿ ಅಲ್ಲಿಂದ ರಸ್ತೆ ಮಾರ್ಗವಾಗಿ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಚಿಕ್ಕೋಡಿ ಹಿರಿಯ ಉಪನೋಂದಣಾಧಿಕಾರಿ ವಿರುದ್ಧ ರೈತರ ಪ್ರತಿಭಟನೆ:ನ್ಯಾಯ ಸಿಗದೇ ಹೋದರೆ ವಿಷಸೇವಿಸಿ ಆತ್ಮಹತ್ಯೆ

Spread the loveಅನ್ಯಾಯವಾದ ರೈತರಿಗೆ ನ್ಯಾಯ ಸಿಗದೇ ಹೋದರೆ ವಿಷಸೇವಿಸಿ ಆತ್ಮಹತ್ಯೆ ಚಿಕ್ಕೋಡಿ ಹಿರಿಯ ಉಪನೋಂದಣಾಧಿಕಾರಿ ವಿರುದ್ಧ ರೈತರು ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ