Breaking News

ಶೀಘ್ರದಲ್ಲೇ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ನಿಶ್ಚಿತಾರ್ಥ!

Spread the love

ಬೆಂಗಳೂರು: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ (Vijay Deverakonda) ಪ್ರೀತಿ ಮಾಡುತ್ತಿದ್ದಾರೆ. ಅವರು ಡೇಟಿಂಗ್ ನಲ್ಲಿದ್ದಾರೆ ಎಂಬ ಗಾಸಿಪ್ ಗಳು ಹರಿದಾಡುತ್ತಲೇ ಇವೇ. ಇದರ ಬೆನ್ನಲ್ಲೇ ಇದೀಗ ಈ ಇಬ್ಬರು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

 

ಹೌದು ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಈ ಜೋಡಿ ಇದುವೆರೆಗೆ ತಾವಿಬ್ಬರೂ ಸಂಬಂಧದಲ್ಲಿ ಇದ್ದೇವೆ ಎಂದು ಸಾರ್ವಜನಿಕವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ. ನಿಶ್ಚಿತಾರ್ಥದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಇಬ್ಬರು ಒಟ್ಟಿಗೆ ಓಡಾಡುತ್ತಿರುವ ಫೋಟೊಗಳು ಹಲವು ಬಾರಿ ವೈರಲ್ ಆಗಿದ್ದವು. ಡೇಟಿಂಗ್ ಬಗ್ಗೆ ಪ್ರಶ್ನೆ ಮಾಡಿದಾಗಲೆಲ್ಲ ನಾವಿಬ್ಬರೂ ಜಸ್ಟ್ ಫ್ರೆಂಡ್ಸ್ ಎಂದೇ ಉತ್ತರಿಸಿದ್ದರು. ಕಳೆದ ಕೆಲವು ದಿನಗಳಿಂದ, ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥದ ಬಗ್ಗೆ ವರದಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಫೆಬ್ರವರಿ ಎರಡನೇ ವಾರದಲ್ಲಿ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ವರದಿಯಾಗಿದೆ.

2016ರಲ್ಲಿ ರಿಷಭ್ ಶೆಟ್ಟಿ (Rishabh Shetty) ನಿರ್ದೇಶನದಲ್ಲಿ ಮೂಡಿ ಬಂದ ಕಿರಿಕ್ ಪಾರ್ಟಿ (Kirik Party) ಮೂಲಕ ರಶ್ಮಿಕಾ ಮಂದಣ್ಣ ಚಿತ್ರ ರಂಗಕ್ಕೆ ಪಾದಾರ್ಪಣೆ ಮಾಡಿದರು. ಚಿತ್ರದ ಯಶಸ್ಸಿನ ಬೆನ್ನಲ್ಲೇ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ (Rakshit Shetty) ಹಾಗು ರಶ್ಮಿಕಾ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಸ್ವಲ್ಪ ದಿನಗಳ ಬಳಿಕ ಈ ನಿಶ್ಚಿತಾರ್ಥ ಮುರಿದು ಬಿದ್ದಿತ್ತು.

ಇದೇ ವೇಳೆ ತೆಲುಗಿನ ʻಗೀತ ಗೋವಿಂದಂʼ (Geeta Govindam) ಚಿತ್ರ ಬಿಡುಗಡೆಯಾಯಿತು. ಈ ಚಿತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ನಡುವಿನ ಕೆಮಿಸ್ಟ್ರಿ ಪ್ರೇಕ್ಷಕರ ಮನ ಗೆದ್ದಿತ್ತು. ಅಂದಿನಿಂದ ಈ ಇಬ್ಬರು ಪ್ರೀತಿಯಲ್ಲಿದ್ದಾರೆ, ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಗಾಸಿಪ್ ಗಳು ಹರಿದಾಡುತ್ತಲೇ ಇವೆ. ಇದುವರೆಗೂ ರೂಮರ್ಸ್ ಗಳಿಗೂ ಈ ಇಬ್ಬರು ಸ್ಪಶ್ಟತೆ ನೀಡಿಲ್ಲ. ಇದೀಗ ನಿಶ್ಚಿತಾರ್ಥದ ಬಗ್ಗೆ ಪ್ರತಿಕ್ರಿಯೆ ನೀಡುತ್ತರೆಯೇ ಎಂಬುದನ್ನು ಕಾದು ನೋಡಬೇಕಿದೆ.


Spread the love

About Laxminews 24x7

Check Also

ಕಾರ್ತಿಕಾದಲ್ಲಿ ಮಾನ್ಸೂನ್ ಡಬಲ್ ಧಮಾಕಾ ಆಫರ್ ಆರಂಭ…

Spread the love ಕಾರ್ತಿಕಾದಲ್ಲಿ ಮಾನ್ಸೂನ್ ಡಬಲ್ ಧಮಾಕಾ ಆಫರ್ ಆರಂಭ… ಖರೀದಿಗಾಗಿ ಮುಗಿ ಬೀಳುತ್ತಿರುವ ಗ್ರಾಹಕರು!!! ಮಾನ್ಸೂನ್ ಆರಂಭಗೊಂಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ