Breaking News

ಹುಂಡಿ ಹಣ ಆಯಾ ದೇವಾಲಯಕ್ಕೆ ಬಳಕೆಯಾಗಲಿ: ಸಚಿವ ರಾಮಲಿಂಗಾ ರೆಡ್ಡಿ

Spread the love

ಧಾರವಾಡ: ಹುಂಡಿಯಲ್ಲಿ ಸಂಗ್ರಹವಾಗುವ ಹಣ ಆಯಾ ದೇವಸ್ಥಾನಕ್ಕೆ (Temple) ಬಳಸಬೇಕು ಎಂದು ಮುಜರಾಯಿ ಇಲಾಖೆ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga reddy) ಹೇಳಿದರು.

ಇಂದು ಧಾರವಾಡದ (Dharwad) ನೂತನ ಸಿಬಿಟಿ ನಿಲ್ದಾಣಕ್ಕೆ (CBT Bus Stop) ಶಂಕುಸ್ಥಾಪನೆ ನೆರವೇರಿಸಿದರು.

ಧಾರವಾಡದ ಸಿಬಿಟಿ ಬಸ್​ ನಿಲ್ದಾಣ ನಿರ್ಮಾಣವಾಗಿ 50 ವರ್ಷಗಳಾಗಿವೆ. ಹೀಗಾಗಿ ಹೊಸ ಬಸ್​ ನಿಲ್ದಾಣಕ್ಕೆ ಸರ್ಕಾರ ಮುಂದಾಗಿದೆ. 13.11 ಕೋಟಿ ರೂ. ವೆಚ್ಚದಲ್ಲಿ ನಿಲ್ದಾಣ ನಿರ್ಮಾಣವಾಗಲಿದೆ. ಒಂದು ವರ್ಷದಲ್ಲಿ ನಿಲ್ದಾಣ ನಿರ್ಮಾಣವಾಗಲಿದೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ ಬರುವ ಜನರ ಸಂಖ್ಯೆ ಹೆಚ್ಚಳವಾಗಿದೆ. ಇದರಿಂದ ಮುಜರಾಯಿ ಇಲಾಖೆಗೆ ಆದಾಯ ಹೆಚ್ಚಿಗೆ ಬರುತ್ತಿದೆ ಎಂಬ ಪ್ರಶ್ನೆ ಬರುವುದಿಲ್ಲ. ಮುಜರಾಯಿ ಇಲಾಖೆ ಅಡಿಯಲ್ಲಿ 34 ಸಾವಿರ ದೇವಸ್ಥಾನಗಳಿವೆ. ದೇವಸ್ಥಾನಗಳ ಹುಂಡಿಗೆ ಸಾಕಷ್ಟು ಹಣ ಬರುತ್ತಿದೆ. ಒಂದು ದೇವಸ್ಥಾನದ ಹಣ ಮತ್ತೊಂದು ದೇವಸ್ಥಾನಕ್ಕೆ ಬಳಸುವುದಿಲ್ಲ. ಆಯಾ ದೇವಸ್ಥಾನದ ಹುಂಡಿ ಹಣ ಅದೇ ದೇವಸ್ಥಾನಕ್ಕೆ ಸೇರುತ್ತದೆ.

ಶಕ್ತಿ ಯೋಜನೆಯಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಳ ವಿಚಾರವಾಗಿ ಮಾತನಾಡಿದ ಅವರು, ಶಕ್ತಿ ಯೋಜನೆ ಜಾರಿ ಮುನ್ನ ಪ್ರತಿದಿನ ರಾಜ್ಯದಲ್ಲಿ 80 ಲಕ್ಷ ಜನ ಓಡಾಡುತ್ತಿದ್ದರು. ಶಕ್ತಿ ಯೋಜನೆ ಆರಂಭವಾದಾಗಿನಿಂದ ನಿತ್ಯ ಓಡಾಡುವವರ ಸಂಖ್ಯೆ 1 ಕೋಟಿಗೂ ಮೇಲಾಗಿದೆ. ಹೀಗಾಗಿ ಶಾಲಾ ವಿದ್ಯಾರ್ಥಿಗಳಿಗೆ ಸ್ವಲ್ಪ ತೊಂದರೆಯಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಹೊಸ ಬಸ್ ಖರೀದಿ ಆಗಿರಲಿಲ್ಲ. ಸಾರಿಗೆ ಇಲಾಖೆಗೆ ಸಿಬ್ಬಂದಿಯನ್ನೂ ನೇಮಕ ಮಾಡಿರಲಿಲ್ಲ. ಈಗ ಹೊಸ ಬಸ್​ ಖರೀದಿ ಮಾಡುತ್ತೇವೆ. ಆಗ ಸಮಸ್ಯೆ ಬಗೆಹರಿಯುತ್ತೆ ಎಂದರು.

ಶಕ್ತಿ ಯೋಜನೆ ಬಗ್ಗೆ ಬಿಜೆಪಿ (BJP) ಆರೋಪ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರು ತಾವು ಕೆಲಸ ಮಾಡುವುದಿಲ್ಲ. ಕೆಲಸ ಮಾಡುವವರಿಗೂ ಬಿಡುವುದಿಲ್ಲ. ಅವರು ನಾಲ್ಕು ವರ್ಷದಿಂದ ಒಂದೇ ಒಂದು ಬಸ್ ಖರೀದಿಸಿಲ್ಲ. ಬಸ್ ನಿಲ್ದಾಣಗಳನ್ನು ಏಕೆ ಕಟ್ಟಲಿಲ್ಲ? 13,888 ಸಿಬ್ಬಂದಿ ನಿವೃತ್ತಿಯಾಗಿದ್ದಾರೆ. ನಾಲ್ಕು ವರ್ಷದಲ್ಲಿ ಒಂದೇ ಒಂದು ನೇಮಕಾತಿ ಮಾಡಲಿಲ್ಲ. ಇವತ್ತು ಪ್ರತಿ ದಿನ 60 ಲಕ್ಷ ಜನ ಹೆಣ್ಣು ಮಕ್ಕಳು ಬಸ್‌ನಲ್ಲಿ ಓಡಾಡುತ್ತಿದ್ದಾರೆ. ಇದನ್ನು ತಡೆಯಲು ಬಿಜೆಪಿಗೆ ಆಗುತ್ತಿಲ್ಲ. ಅವರಿಗೆ ಹೊಟ್ಟೆ ಉರಿ ಆಗುತ್ತಿದೆ ಎಂದು ವಾಗ್ದಾಳಿ ಮಾಡಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ