Breaking News

ನಡು ರಸ್ತೆಯಲ್ಲೇ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳು

Spread the love

ರಾಯಚೂರು, : ನಡು ರಸ್ತೆಯಲ್ಲೇ ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ರಾಯಚೂರು (Raichur) ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರುಕಾಲುವೆ ಬಳಿನಡೆದಿದೆ. ಕಾಪರ್ ವೈರ್ ಕಳ್ಳತನ ಆರೋಪಿಗಳನ್ನು ಬಂಧಿಸಲು ಹೋದಾಗ, ಬಳಗಾನೂರ ಠಾಣೆಯ ಪೊಲೀಸ್​ ಪೇದೆ(Police constable) ಗಳಾದ ಮಂಜುನಾಥ್​ ಹಾಗೂ ಗೋಪಾಲ್ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ.

ಗಾಯಗೊಂಡ ಕಾನ್ಸ್​ಟೇಬಲ್​ಗಳಿಗೆ ಸಿಂಧನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹಲ್ಲೆಗೈದ ಆರೋಪಿಗಳಿಗಾಗಿ ಬಳಗಾನೂರ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ ಕುರಿತು ಬಳಗಾನೂರ ಠಾಣೆಯಲ್ಲಿ 6 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಪೊಲೀಸರ ಮೇಲೆ ಹಲ್ಲೆ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ