Breaking News

​ ಯತ್ನಾಳ್​ಗೆ ಮುಖಭಂಗ ಕಾಂಗ್ರೆಸ್​ ತೆಕ್ಕೆಗೆ ವಿಜಯಪುರ ಮಹಾನಗರ ಪಾಲಿಕೆ

Spread the love

ವಿಜಯಪುರ: ತೀವ್ರ ಕುತೂಹಲ ಮೂಡಿಸಿದ್ದ ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್​ ಸ್ಥಾನಕ್ಕೆ ಚುನಾವಣೆ ನಡೆಸಿದ್ದು, ಎರಡೂ ಸ್ಥಾನದಲ್ಲಿ ಕಾಂಗ್ರೆಸ್(Congress) ​ ಜಯಭೇರಿ ಬಾರಿಸಿದೆ. ವಿಜಯಪುರ ಪಾಲಿಕೆ ಮೇಯರ್​ ಆಗಿ ಕಾಂಗ್ರೆಸ್​ನ ಮೆಹಜಬೀನ್ ಹೊರ್ತಿ ಆಯ್ಕೆಯಾಗಿದ್ದರೆ, ಉಪ ಮೇಯರ್​ ಆಗಿ ಕಾಂಗ್ರೆಸ್​​ನ ದಿನೇಶ್ ಹಳ್ಳಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ವಿಜಯಪುರ ಮಹಾನಗರ ಪಾಲಿಕೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು, ಬಿಜೆಪಿ(BJP) ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ಗೆ ) ಮುಖಭಂಗವಾಗಿದೆ.

ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ವಿಜಯಪುರ ಪಾಲಿಕೆ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಮಹೆಜಬೀನ್ ಹೊರ್ತಿ ಒಟ್ಟು 22 ಮತ ಪಡೆದು ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಇನ್ನು ಎಸ್ ಟಿಗೆ ಮೀಸಲಾಗಿದ್ದ ಉಪಮೇಯರ್ ಸ್ಥಾನಕ್ಕೆ ಕಾಂಗ್ರೆಸ್ಸಿನ ದಿನೇಶ್ ಹಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

10 ಕಾಂಗ್ರೆಸ್ ಸದಸ್ಯರು ಐವರು ಪಕ್ಷೇತರರು, ಇಬ್ಬರು ಎಐಎಂಐಎಂ, ಓರ್ವ ಜೆಡಿಎಸ್ ಸದಸ್ಯರ ಬೆಂಬಲ ಹಾಗೂ ಶಾಸಕರಾದ ಎಂಬಿ ಪಾಟೀಲ್, ವಿಠ್ಠಲ್ ಕಟಕದೊಂಡ, ಪರಿಷತ್ ಸದಸ್ಯರಾದ ಸುನಿಲಗೌಡ ಪಾಟೀಲ್, ಪ್ರಕಾಶ್ ರಾಥೋಡ್ ಮತಗಳ ಬೆಂಬಲದೊಂದಿಗೆ ಕಾಂಗ್ರೆಸ್​ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದೆ.

ಇನ್ನು ಬಿಜೆಪಿಯ 16 ಸದಸ್ಯರು ಹಾಗೂ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಚುನಾವಣಾ ಪ್ರಕ್ರಿಯೆಯನ್ನು ಬಹಿಷ್ಕರಿವು ಮೂಲಕ ಸೋಲೊಪ್ಪಿಕೊಂಡಿದ್ದಾರೆ. ಅಲ್ಲದೇ ಬೆಳಗಾವಿಯ ಪ್ರಾದೇಶಿಕ ಆಯುಕ್ತರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಯತ್ನಾಳ್ ಹಾಗೂ ಬಿಜೆಪಿ ಸದಸ್ಯರು ಕಪ್ಪುಪಟ್ಟಿ ಪ್ರದರ್ಶಿಸಿದರು.

ಬೆಳಗಾವಿಯ ಪ್ರಾದೇಶಿಕ ಆಯುಕ್ತ ಸಂಜಯ್ ಶೆಟ್ಟೆಣ್ಣನವರ್ ಸರ್ಕಾರದ ಕೈಗೊಂಬೆಯಾಗಿ ವರ್ತನೆ ಮಾಡುತ್ತಿದ್ದಾರೆಂದು ಆರೋಪಿಸಿ ಬಿಜೆಪಿ ನಾಯಕರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಪಾಲಿಕೆ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ