ಬೆಂಗಳೂರು ಗ್ರಾಮಾಂತರ, ಜ.09 : ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿ ಆತ್ಯಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯದೊಡ್ಡಬಳ್ಳಾಪುರ( Doddaballapura )ದ ತ್ಯಾಗರಾಜನಗರದ ಮನೆಯೊಂದರಲ್ಲಿ ನಡೆದಿದೆ.
ಜಾನ್ಸಿ(17) ಆತ್ಯಹತ್ಯೆಗೆ ಶರಣಾದ ವಿದ್ಯಾರ್ಥಿ. ನಾನು ಯಾರಿಗೂ ಮೋಸ ಮಾಡಿಲ್ಲ. ಬುಜ್ಜಿ, ಆಲ್ ಫ್ರೆಂಡ್ಸ್ ಮಿಸ್ಯೂ. ನಾನು ಲೋಕ ಬಿಟ್ಟು ತೆರಳುತ್ತಿದ್ದೇನೆ, ಎಲ್ಲರೂ ಖುಷಿ ಖುಷಿಯಾಗಿರಿ ಎಂದು ಡೆತ್ ನೋಟ್ ಬರೆದಿಟ್ಟು,
ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಈ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.