ಅಪಘಾತದಲ್ಲಿ (Accident) ಚೆನ್ನುಪಾಟೀಲ(26), ಯುವರಾಜ(28) ಸ್ಥಳದಲ್ಲೇ ಮೃತಪಟ್ಟಿದ್ದಾರೆ (Death). ಇನ್ನು ಮಂಜು, ವೀರಣ್ಣ, ಚಿದಂಬರಂ ಎನ್ನುವವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗದಗ ಜಿಲ್ಲೆಯಿಂದ ಕೇರಳಕ್ಕೆ ಹೋಗುತ್ತಿದ್ದ ಐಯಪ್ಪಸ್ವಾಮಿ ಮಾಲಾಧಾರಿಗಳ ವಾಹನ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಕ್ರಾಸ್ ಬಳಿ NH 50 ರಸ್ತೆಯಲ್ಲಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಇಬ್ಬರು ಮೃತಪಟ್ಟಿದ್ದು ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳು ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಖಾನಾಹೊಸಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಡೆತ್ ನೋಟ್ ಬರೆದಿಟ್ಟು ಯುವತಿ ನೇಣಿಗೆ ಶರಣು
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ತ್ಯಾಗರಾಜನಗರದಲ್ಲಿ ಡೆತ್ ನೋಟ್ ಬರೆದಿಟ್ಟು ಯುವತಿ ನೇಣಿಗೆ ಶರಣಾದ ಘಟನೆ ನಡೆದಿದೆ. ಕಾಲೇಜಿನಿಂದ ಬಂದ ದ್ವಿತಿಯ ಪಿಯುಸಿ ವಿದ್ಯಾರ್ಥಿನಿ ಜಾನ್ಸಿ (17) ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡೆತ್ ನೋಟ್ ನಲ್ಲಿ, ನಾನು ಯಾರಿಗೂ ಮೋಸ ಮಾಡಿಲ್ಲ. ಬುಜ್ಜಿ, ಆಲ್ ಫ್ರೆಂಡ್ಸ್ ಮಿಸ್ ಯೂ. ನಾನು ಈ ಲೋಕವನ್ನು ಬಿಟ್ಟು ತೆರಳುತ್ತಿದ್ದೆನೆ. ಎಲ್ಲರೂ ಖುಷಿಯಾಗಿರಿ ಎಂದು ಬರೆದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.