Breaking News

ಗಡಿ ವಿವಾದ: ಮರಾಠಿ ಭಾಷಿಕರಿಗೆ ಪರಿಹಾರ ನಿಧಿ ಮಂಜೂರು, ಬೆಳಗಾವಿಯಲ್ಲೇ ಆರೋಗ್ಯ ವಿಮೆ ತೆರೆದ ಮಹಾರಾಷ್ಟ್ರ

Spread the love

ಬೆಳಗಾವಿ, ಜನವರಿ 09: ಇತ್ತೀಚಿಗೆಮಹಾರಾಷ್ಟ್ರಸಂಸದ ಧೈರ್ಯಶೀಲ ಮಾನೆ (Dhairyashil mane) ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಬಾಲ್ಕಿ ಸೇರಿದಂತೆ 865 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕು. ಕರ್ನಾಟಕದ ಗಡಿಯಲ್ಲಿ ಇರುವ ಮರಾಠಿ ಭಾಷಿಕರಿಗೆ ಮಹಾರಾಷ್ಟ್ರ (Maharashtra) ಸರ್ಕಾರ ಆರೋಗ್ಯ ವಿಮೆ (Health Insurance) ಜಾರಿ ಮಾಡಲಿದೆ ಎಂದಿದ್ದರು. ಈ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಸರ್ಕಾರ ಕರ್ನಾಟಕದ ಗಡಿಯೊಳಗಿನ ಮರಾಠಿ ಭಾಷಿಕರಿಗೆ ಆರೋಗ್ಯ ಪರಿಹಾರ ನಿಧಿ ಮಂಜೂರು ಮಾಡಿದೆ.

ಪರಿಹಾರ ನಿಧಿ ಜೊತೆಗೆ ಕರ್ನಾಟಕದ 865 ಹಳ್ಳಿ-ಪಟ್ಟಣದ ಜನರಿಗಾಗಿ ಮಹಾತ್ಮ ಫುಲೆ ಆರೋಗ್ಯ ವಿಮಾ ಯೋಜನೆ ಜಾರಿ ಮಾಡಿದೆ. ಇದೀಗ ಬೆಳಗಾವಿಯಲ್ಲಿ ಮಹಾರಾಷ್ಟ್ರದ ಆರೋಗ್ಯ ವಿಮೆ ಯೋಜನೆಗೆ ಅರ್ಜಿ ಸ್ವೀಕರಿಸಲಾಗುತ್ತಿದೆ. ಬೆಳಗಾವಿ ಮಹಾನಗರ ವ್ಯಾಪ್ತಿಯಲ್ಲಿ ಐದು ಕಡೆ ಅರ್ಜಿ ಸ್ವೀಕಾರ ಕೇಂದ್ರ ಆರಂಭವಾಗಿವೆ. ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿ ಶಿಫಾರಸ್ಸು ಪತ್ರದೊಂದಿಗೆ ಅರ್ಜಿ ಸ್ವೀಕರಿಸಲಾಗುತ್ತಿದೆ. ಬೆಳಗಾವಿ, ಕಾರವಾರ, ಬೀದರ, ಕಲಬರ್ಗಿ ಜಿಲ್ಲೆ ಸೇರಿ ಗಡಿ ಭಾಗದ 865 ಪ್ರದೇಶದಲ್ಲಿ ಯೋಜನೆ ಜಾರಿಯಾಗಲಿದೆ. ಈ ಯೋಜನೆ ಬೆಳಗಾವಿ ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಜಾರಿ ಬಂದಿದೆ.

ಅಲ್ಲದೇನಾಡದ್ರೋಹಿ ಎಂಇಎಸ್ ಪುಂಡರಿಗೆ ಮಹಾರಾಷ್ಟ್ರ ಸರ್ಕಾರ ಅಧಿಕಾರದ ಬಲ ನೀಡಿದೆ. ಮಹಾರಾಷ್ಟ್ರ ಸರ್ಕಾರ ಸತ್ತು ಹೋಗಿದ್ದ ಎಂಇಎಸ್ ಬಲ ಹೆಚ್ಚಿಸಿದೆ. ಏಕನಾಥ್​​ ಶಿಂಧೆ ಮುಖ್ಯಮಂತ್ರಿಗಳ ಪರಿಹಾರ ನಿಧಿನಿಂದ ಬೆಳಗಾವಿ ಎಂಇಎಸ್ ಕಾರ್ಯಕರ್ತರಿಗೆ 1ಲಕ್ಷ ಹಣ ಬಿಡುಗಡೆ ಮಾಡಿದ್ದಾರೆ.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ