Breaking News

ಲೋಕಸಭೆ ಚುನಾವಣೆಗೆ ಗ್ಯಾರಂಟಿಯೇ ಕಾಂಗ್ರೆಸ್ ಅಸ್ತ್ರ

Spread the love

ಬೆಂಗಳೂರು, (ಜನವರಿ 10): ಮುಂದಿನ ಲೋಕಸಭಾ ಚುನಾವಣೆಗೆ (Lok Sabha Election 2024) ಭರ್ಜರಿ ತಯಾರಿಯಲ್ಲಿರುವ ಆಡಳಿತಾರೂಢ ಕಾಂಗ್ರೆಸ್‌ (Congress Karnataka) ಈ ಬಾರಿ ಏನಿಲ್ಲವೆಂದರೂ 28 ಕ್ಷೇತ್ರಗಳಲ್ಲಿ 20 ಕ್ಷೇತ್ರಗಳನ್ನು ಗೆಲ್ಲಲು ಪಣ ತೊಟ್ಟಿದೆ.

ಈ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುತ್ತಿದೆ. ಅದರಲ್ಲೂ ಮುಖ್ಯವಾಗಿ ಜಾರಿಗೆ ತಂದಿರುವ ಐದು ಗ್ಯಾರಂಟಿಗಳನ್ನು(Guarantee schemes )ಲೋಕಸಭೆ ಚುನಾವಣೆಗೆ ಬಳಸಿಕೊಳ್ಳಲು ಮುಂದಾಗಿದೆ. ಹೀಗಾಗಿ ಗ್ಯಾರಂಟಿ ಯೋಜನೆ ಅನುಷ್ಟಾನಕ್ಕೆ ಸಮಿತಿ ರಚನೆ ಮಾಡಲಾಗಿದೆ.

ರಾಜ್ಯ, ಜಿಲ್ಲಾ, ತಾಲೂಕು ಹಾಗೂ ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಸಮಿತಿ ರಚನೆ ಮಾಡಲಾಗಿದೆ. KPCC ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸಮಿತಿ ರಚನೆ ಬಗ್ಗೆ ಘೋಷಣೆ ಮಾಡಿದ್ದಾರೆ. ಲೋಕಸಭಾ ಚುನಾವಣೆ ಸಂಬಂಧ ಮತಗಳನ್ನು ಸೆಳೆಯಲು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು

Spread the love ಹುಕ್ಕೇರಿ : ಗೋಕಾಕ ತಾಲೂಕಿನ ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಧಾರಾಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ