ಬೆಳಗಾವಿ, ಜನವರಿ 10: ಡಿಸಿ ಕಚೇರಿಯಲ್ಲೇ ವಿಷ(poison)ಕುಡಿದ ವ್ಯಕ್ತಿ ಆತ್ಮಹತ್ಯೆ ಯತ್ನಿಸಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಜಿಲ್ಲೆಯ ಗೋಕಾಕ್ ಪಟ್ಟಣ ನಿವಾಸಿ ಕುಮಾರ್ ಕೊಪ್ಪದ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಡಿಸಿ ಕಚೇರಿಯಲ್ಲಿ ಇಲ್ಲದಿರುವಾಗ ಆತ್ಮಹತ್ಯೆ ಯತ್ನಿಸಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದಕ್ಕೆ ಯಾವುದೇ ಕಾರಣ ತಿಳಿದಿಲ್ಲ. ಪೊಲೀಸರು ಅಸ್ವಸ್ಥನನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ದುರ್ಮರಣ
ವಿಜಯಪುರ: ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಅಪಘಾತ ನಡೆದಿದೆ. ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ಸರ್ಕಾರಿ ಬಸ್ ಹೊತ್ತಿ ಉರಿದಿದೆ. ದೃಷ್ಟವಶಾತ್ ಪ್ರಯಾಣಿಕರು ಬಸ್ನಿಂದ ಇಳಿದು ಪ್ರಾಣ ಉಳಿಸಿಕೊಂಡಿದ್ದಾರೆ.