ಬೆಂಗಳೂರು: ಇದೇ 22ರಂದು ಅಯೋಧ್ಯೆ (Ayodhya) ರಾಮ ಮಂದಿರ (Ram MandiR) ಉದ್ಘಾಟನೆಗೊಳ್ಳಲಿದೆ. ಈ ನಡುವೆ ರಾಮನನ್ನು ಬಿಜೆಪಿ (BJP) ರಾಜಕೀಯ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ (Congress) ನಾಯಕರು ಆರೋಪಿಸಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬಿಜೆಪಿ ವಿರುದ್ಧ ಕಿಡಿಕಾರಿದ್ದು, ‘ಬಿಜೆಪಿ ರಾಮನನ್ನು ರಾಜಕೀಯ ಪ್ರಚಾರಕ್ಕೆ ಬಳಸಿದ್ದು ರಾಮ ಹಾಗೂ ಸಮಸ್ತ ಹಿಂದೂಗಳಿಗೆ ಮಾಡಿದ ದ್ರೋಹ’ ಎಂದು ಹೇಳಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ (X) ಸರಣಿ ಟ್ವಿಟ್ ಮಾಡಿರುವ ಅವರು, “ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge), ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ (Sonia Gandhi) ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಅಧೀರ್ ರಂಜನ್ ಚೌದರಿ (Adhir Ranjan Chaudhary) ಅವರ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ.