ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ರಾಜ್ಯಕ್ಕೆ ಆಗಮಿಸಿದ ಬೆನ್ನಲ್ಲೇ ಹಲವು ತಿಂಗಳಿನಿಂದ ನನೆಗುದಿಗೆ ಬಿದ್ದಿದ್ದ ನಿಗಮ ಮಂಡಳಿ ಅಧ್ಯಕ್ಷ ( corporation board chairman) ನೇಮಕಾತಿ ಪಟ್ಟಿಗೆ ಮರುಜೀವ ಬಂದಿದೆ. ಸುರ್ಜೆವಾಲ ಅವರು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಸುದೀರ್ಘವಾಗಿ ಮಾತುಕತೆ ನಡೆಸಿ ನಿಗಮ ಮಂಡಳಿ ಪಟ್ಟಿ ಅಂತಿಮಗೊಳಿಸಿದ್ದಾರೆ. ಇದರ ಮಧ್ಯೆ ನಾನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಹೀಗಾಗಿ ನನ್ನನ್ನು ಪರಿಗಣಿಸಬೇಡಿ ಎಂದು ಚಳ್ಳಕೆರೆ ಶಾಸಕ ಟಿ ರಘುಮೂರ್ತಿ (raghumurthy) ಅವರು ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ನನ್ನನ್ನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬೇಡಿ. ಕಾಂಗ್ರೆಸ್ ಪಕ್ಷ ನನಗೆ ಮೂರು ಬಾರಿ ಸ್ಪರ್ಧೆಗೆ ಅವಕಾಶ ನೀಡಿದೆ. ಕ್ಷೇತ್ರದ ಜನ ನಿರಂತರವಾಗಿ ನನಗೆ ಆಶೀರ್ವದಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷದ ವರಿಷ್ಠರು, ಕಾರ್ಯಕರ್ತರಿಗೆ ಋಣಿಯಾಗಿದ್ದೇನೆ. ಆದ್ರೆ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಪರಿಗಣಿಸಬೇಡಿ. ನಾನು ಪಕ್ಷಕ್ಕೆ ಮುಜುಗರ ಆಗದಂತಿರಲು ಯತ್ನಿಸಿದ್ದೇನೆ. ಇನ್ಮುಂದೆ ಸಹ ಪಕ್ಷಕ್ಕೆ ಮುಜುಗರ ಆಗದಂತೆ ಇರುತ್ತೇನೆ. ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದ ಸಹಕಾರ ನಿರೀಕ್ಷಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Laxmi News 24×7