ಬೆಂಗಳೂರು: ರಾಜ್ಯದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ (DCM) ಮಾಡಬೇಕು ಎಂದು ಒತ್ತಡ ಹೇರುತ್ತಿರುವವರಿಗೆ ಲೋಕಸಭಾ (lokasabha) ಚುನಾವಣೆ (election) ಜವಾಬ್ದಾರಿ ನೀಡಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (d.k. shivakumar) ಅವರು ಕಾಂಗ್ರೆಸ್ (congress) ಹೈಕಮಾಂಡ್ ಗೆ ಸಲಹೆ ನೀಡಿದ್ದಾರೆ.
ದಲಿತ ಮತ್ತು ಸಿಎಂ ಆಪ್ತ ಸಚಿವರು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣಗಳ ನಡುವೆ ಪೈಪೋಟಿ ಹೆಚ್ಚಾಗಿದ್ದು, ಆದರೆ, ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (mallikarjun kharge), ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ಅವರು ಇಂಥ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.
ಇದೀಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಈ ರೀತಿಯ ಹೇಳಿಕೆ ಕೊಡುವವರಿಗೆ ಚುನಾವಣೆ ಜವಾಬ್ದಾರಿ ನೀಡುವಂತೆ ಸಲಹೆ ನೀಡಿದ್ದು, ಅವರನ್ನೇ ಚುನಾವಣೆಯಲ್ಲಿ ಕಣಕ್ಕೆ ಇಳಿಸಿ ಪ್ರಬಲ ಅಭ್ಯರ್ಥಿ ಕೊರತೆಯನ್ನು ನೀಗಿಸಿ ಎಂದು ಹೇಳಿದ್ದಾರೆ.