ಬೆಂಗಳೂರು,: ಮುಂಬರುವ ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ (BJP Karnataka) ಸಿದ್ಧತೆ ನಡೆಸಿದ್ದು, ಮೊದಲ ಹಂತದಲ್ಲಿ ಕ್ಲಸ್ಟರ್ ಮಟ್ಟದ ಸಭೆಯನ್ನು ಪೂರ್ಣಗೊಳಿಸಿದ್ದು, ಇಲ್ಲಿ ಪಕ್ಷದ ಕಾರ್ಯತಂತ್ರ ಸೇರಿದಂತೆ ಮುಂದಿನ ನಡೆ ಹೇಗಿರಬೇಕು ಎಂಬುದನ್ನು ಚರ್ಚೆ ಮಾಡಲಾಗಿದೆ. ಇನ್ನು ರಾಜ್ಯದ 8 ಕ್ಲಸ್ಟರ್‌ಗಳ ವ್ಯಾಪ್ತಿಯಲ್ಲಿ ಬರುವ 28 ಲೋಕಸಭಾ ಕ್ಷೇತ್ರಗಳ ಸಭೆ ಮುಕ್ತಾಯಗೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ,ಬುಧವಾರ ಮತ್ತು ಗುರುವಾರ ಎರಡು ದಿನಗಳ ಕಾಲ ರಾಜ್ಯದ 28 ಕ್ಷೇತ್ರಗಳ 8 ಕ್ಲಸ್ಟರ್‌ಗಳನ್ನೊಳಗೊಂಡ ನಾಯಕರ ಜತೆ ಸುದೀರ್ಘವಾಗಿ ಚರ್ಚೆ ಮಾಡಿದ್ದೇವೆ. ಮುಂದಿನ ಚುನಾವಣೆಯ ದೃಷ್ಟಿಯಿಂದ ದೇಶದಲ್ಲಿ ಬಿಜೆಪಿ ಪರವಾದ ವಾತಾವರಣ ಇದೆ ಎಂದರು.
ಉತ್ಸಾಹದಲ್ಲಿ ಬಿಜೆಪಿ ಕಾರ್ಯಕರ್ತರು
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯ ಜನಪ್ರಿಯತೆ ಹೆಚ್ಚಾಗಿದೆ. ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವ ವಾತಾವರಣ ಇದೆ. ರಾಜ್ಯದಲ್ಲಿ ಇದಕ್ಕೆ ಪೂರಕವಾಗದ ವಾತಾವರಣ ನಿರ್ಮಾಣ ಆಗಿದೆ. ಮತದಾರರು ಬಹಳ ಉತ್ಸಾಹದಲ್ಲಿದ್ದಾರೆ. ಕಾರ್ಯಕರ್ತರು ಕೂಡ ಸೋಲಿನ ಹತಾಶೆಯಿಂದ ಹೊರಗೆ ಬಂದಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಉತ್ಸಾಹದಲ್ಲಿದ್ದಾರೆ ಎಂದು ಹೇಳಿದರು.