Breaking News

ಯತ್ನಾಳ್ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ,ಪ್ರಕರಣ ರದ್ದು ಕೋರಿ ರಮೇಶ್ ಜಾರಕಿಹೊಳಿ ಅರ್ಜಿ

Spread the love

ಬೆಂಗಳೂರು/ವಿಜಯಪುರ, (ಜನವರಿ 12): ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ (Basangouda Patil Yatnal) ವಿರುದ್ಧದ ಕೇಸ್​ಗೆ ಕರ್ನಾಟಕ ಹೈಕೋರ್ಟ್ (Karnataka high Court) ತಡೆ ನೀಡಿದೆ. ವಿಧಾನಸಭಾ ಚುನಾವಣೆ (Karnataka Assembly Elections 2023) ವೇಳೆ‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಡಿಯಲ್ಲಿ ಕೇಸ್ ದಾಖಲಾಗಿತ್ತು. ಆದ್ರೆ, ಇದೀಗ ಈ ಪ್ರಕರಣಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ, ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಕೋರ್ಟ್​ ಮೆಟ್ಟಿಲೇರಿದ ರಮೇಶ ಜಾರಕಿಹೊಳಿ

ಮತ್ತೊಂದೆಡೆ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಕೋರುವಂತೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಸಾಲ ಪಾವತಿಸದೆ ಸಹಕಾರಿ ಬ್ಯಾಂಕ್‌ಗೆ ವಂಚನೆ ಆರೋಪ ಪ್ರಕರಣವನ್ನು ರದ್ದು ಕೋರಿ ರಮೇಶ್ ಜಾರಕಿಹೊಳಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಕಂಪನಿಯ ಹುದ್ದೆಗಳಿಗೆ ರಾಜೀನಾಮೆ ನೀಡಿ ಹೊಸಬರ ನೇಮಕವಾಗಿದೆ. ಎನ್‌ಸಿಎಲ್‌ಟಿಯಲ್ಲಿ ವಿಚಾರಣೆ ಇರುವಾಗ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕ್ರಿಮಿನಲ್‌ ಪ್ರಕರಣ ರದ್ದು ಮಾಡುವಂತೆ ರಮೇಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಗಾಗಿ 232 ಕೋಟಿ 88 ಲಕ್ಷ ರೂ. ಸಾಲ ಪಡೆದು ಪಡೆದು ಬಳಿಕ ಮರುಪಾವತಿಸದ ಹಿನ್ನೆಲೆಯಲ್ಲಿ ಅಪೆಕ್ಸ್ ಬ್ಯಾಂಕ್ ದೂರು ನೀಡಿತ್ತು. ಈ ದೂರಿನ ಅನ್ವಯ ರಮೇಶ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.


Spread the love

About Laxminews 24x7

Check Also

ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್’ನಲ್ಲಿ ಶಾಂತಿ ಕದಡಿದ್ರೇ ಹುಷಾರ್…

Spread the love ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್’ನಲ್ಲಿ ಶಾಂತಿ ಕದಡಿದ್ರೇ ಹುಷಾರ್… ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ