ಲೋಕಸಭಾ ಚುನಾವಣೆ: ಪಕ್ಷದ ಅಭ್ಯರ್ಥಿ ಗೆಲ್ಲಿಸದ ಸಚಿವರ ತಲೆದಂಡ- ಡಾ.ಜಿ.ಪರಮೇಶ್ವರ್
Laxminews 24x7
ಜನವರಿ 12, 2024
ರಾಜಕೀಯ, ರಾಜ್ಯ
49 Views
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸದ ಸಚಿವರ ತಲೆದಂಡ ಆಗಲಿದೆ ಎಂಬ ಎಚ್ಚರಿಕೆಯನ್ನು ಹೈಕಮಾಂಡ್ ಕೊಟ್ಟಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಗೆಲ್ಲಲು ಹೈಕಮಾಂಡ್ ಪ್ರತಿ ಸಚಿವರಿಗೆ ಜವಾಬ್ದಾರಿ ನೀಡಿದೆ. ಇದನ್ನು ನಿಭಾಯಿಸದ ಸಚಿವರ ತಲೆ ದಂಡ ಆಗಲಿದೆ ಎಂದು ಹೈಕಮಾಂಡ್ ತಿಳಿಸಿದೆ ಎಂದರು.
ಮುಂಬರುವ ಲೋಕಸಭಾ ಚುನಾವಣೆ ಕುರಿತು ದೆಹಲಿಯಲ್ಲಿ ನಿನ್ನೆ ರಾಜ್ಯದ ಎಲ್ಲ ಸಚಿವರ ಜೊತೆಗೆ ವರಿಷ್ಠರು ನಿನ್ನೆ ಸಭೆ ನಡೆಸಿದ್ದರು. ಈ ಬಗ್ಗೆ ಮಾಹಿತಿ ನೀಡಿದ ಪರಮೇಶ್ವರ್, ಚುನಾವಣೆಯಲ್ಲಿ ಸಚಿವರ ಸ್ಪರ್ಧೆ ಬಗ್ಗೆ ಮಾತನಾಡಿಲ್ಲ.
ನಿರೀಕ್ಷಿತ ಫಲಿತಾಂಶ ಬರದಿದ್ದರೆ ಸಚಿವರ ತಲೆದಂಡ ಆಗಲಿದೆ ಹೈಕಮಾಂಡ್ ಸೂಚಿಸಿರುವುದಾಗಿ ತಿಳಿಸಿದರು