Breaking News

ಜನವರಿ 22ರಂದು ಕಾಂಗ್ರೆಸ್ ನಿಂದ ರಾಮಮಂದಿರಗಳಲ್ಲಿ ವಿಶೇಷ ಪೂಜೆ:C.M,

Spread the love

ಶಿವಮೊಗ್ಗ: ಅಯೋಧ್ಯೆಯಲ್ಲಿ  ರಾಮಲಲ್ಲಾನ  ಪ್ರಾಣಪ್ರತಿಷ್ಠಾಪನೆ ದಿನವಾದ ಜನವರಿ 22 ರಂದು ಕರ್ನಾಟಕದ ರಾಮಮಂದಿರಗಳಲ್ಲಿ  ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು.

 

ಶಿವಮೊಗ್ಗದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ರಾಮನ ಬಗ್ಗೆ ಬಿಜೆಪಿ ರಾಜಕೀಯ ಮಾಡುತ್ತಿದೆ. ಅದನ್ನು ನಾವು ವಿರೋಧಿಸುತ್ತೇವೆ. ನಾವು ಕೂಡ ಶ್ರೀರಾಮನ ಭಕ್ತರೇ ಎಂದು ಹೇಳಿದರು.

ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ನನಗೆ ಸಿಕ್ಕಿಲ್ಲ. ನಾವೂ ಕೂಡ ರಾಮನನ್ನು ಪೂಜಿಸುತ್ತೇವೆ. ಆದರೆ, ರಾಮ ಮಂದಿರ ವಿಚಾರದಲ್ಲಿ ಬಿಜೆಪಿ ಮಾತ್ರ ರಾಜಕೀಯ ಮಾಡುತ್ತಿದೆ. ಜನವರಿ 22ರ ಬಳಿಕ ನಾನೂ ಅಯೋಧ್ಯೆಗೆ ಹೋಗಿ ಶ್ರೀರಾಮನ ದರ್ಶನ ಪಡೆಯುತ್ತೇನೆ ಎಂದು ತಿಳಿಸಿದರು.


Spread the love

About Laxminews 24x7

Check Also

ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ

Spread the loveಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು  ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ