ಶಿವಮೊಗ್ಗ: ಅಲ್ಲಮ ಪ್ರಭು ಒಬ್ಬ ಶ್ರೇಷ್ಠ ಕವಿಯಾಗಿದ್ದು, ಅವರು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ನಮ್ಮ ನಾಡಿಗೆ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರ ಆಶಯದಂತೆ ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು (Allama Prabhu) ಅವರ ಹೆಸರನ್ನು ಇಡುವುದು ಸೂಕ್ತ ಎಂದು ನಾನೂ ಸಹ ಭಾವಿಸಿದ್ದೇನೆ.
ಹೀಗಾಗಿ ಫ್ರೀಡಂ ಪಾರ್ಕ್‌ಗೆ (Freedom Park) ಅಲ್ಲಮ ಪ್ರಭು (Allama Prabhu) ಎಂದು ನಾಮಕರಣ ಮಾಡಲು ನಾನು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಘೋಷಿಸಿದರು.
ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಲ್ಲಮ ಪ್ರಭು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ಅವರ ಕೊಡುಗೆ ಅಸಾಮಾನ್ಯವಾಗಿದೆ. ಹೀಗಾಗಿ ಮಧು ಬಂಗಾರಪ್ಪ ಅವರು ಸೂಚಿಸಿದಂತೆ ಅವರ ಹೆಸರನ್ನು ಇಡುವುದು ಸೂಕ್ತ ಎಂದು ಭಾವಿಸಿದ್ದೇನೆ ಎಂದು ಹೇಳಿದರು.