ಬೆಂಗಳೂರು : ಲೋಕಸಭೆ(loka sabha eleaction) ಚುನಾವಣೆಗೆ ಸಿದ್ದತೆ ಜೋರಾಗಿ ನಡೆಯುತ್ತಿದ್ದು ಕ್ಷೇತ್ರ ಹುಡುಕಾಟ ಕೂಡ ಆರಂಭವಾಗಿದೆ. ಕರ್ನಾಟಕದಿಂದ ರಾಹುಲ್ ಗಾಂಧಿ(Rahul gandhi) ಲೋಕಸಭೆ ಸ್ಪರ್ಧೆ ಮಾಡುತ್ತಾರೆ ಎಂಬ ಸುದ್ದಿ ಹರಿದಾಡುತ್ತಿರುವಾಗಲೇ ಬಿಜೆಪಿಯಿಂದ ಇಬ್ಬರು ಕೇಂದ್ರ ನಾಯಕರು ಕರ್ನಾಟಕದಲ್ಲಿ ಕ್ಷೇತ್ರ ಹುಡುಕುತ್ತಿದ್ದಾರೆ ಎನ್ನಲಾಗಿದೆ.
ಈಗಾಗಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ಕೇಂದ್ರ ಸಚಿವರನ್ನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಸೂಚನೆ ನೀಡಲಿದೆ ಎಂಬ ಮಾತು ಕೇಳಿ ಬಂದಿದ್ದು ಕರ್ನಾಟಕದ ಬೆಂಗಳೂರು ದಕ್ಷಿಣ, ದಕ್ಷಿಣ ಕ್ನನಡ ಹಾಗೂ ಉತ್ತರ ಕನ್ನಡ ಕ್ಷೇತ್ರಗಳು ಭಾರಿ ಚರ್ಚೆಗೆ ಬಂದಿವೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಿದೇಶಾಂಗ ಖಾತೆ ಸಚಿವ ಜೈ ಶಂಕರ್ ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಡಿದೆ.
ನಿರ್ಮಲಾ ಸೀತಾರಾಮನ್ ಎರಡು ಬಾರಿ ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ಕಾರಣ ಕೇಸರಿ ಭದ್ರಕೋಟೆ ದಕ್ಷಿಣ ಕನ್ನಡ ನಿರ್ಮಲಾ ಸೀತಾರಾಮನ್ ಸ್ಪರ್ಧೆಗೆ ಸೂಕ್ತ ಕ್ಷೇತ್ರ ಎಂದು ಹೇಳಲಾಗುತ್ತಿದೆ, ಹೀಗಾದರೆ ನಳೀನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ಕೈತಪ್ಪಲಿದೆ.
ಹಾಗೇ, ಬೆಂಗಳೂರಿನ ಜೊತೆ ನಂಟು ಹೊಂದಿರುವ ಸಚಿವ ಜೈ ಶಂಕರ್‌ಗೆ ಬೆಂಗಳೂರು ದಕ್ಷಿಣ ಕ್ಷೇತ್ರ ಉತ್ತಮವಾಗಿದೆ ಎಂಬ ಮಾತು ಕೇಳಿ ಬಂದಿದೆ. ಬೆಂಗಳೂರಿನ ಮಿಲಿಟರಿ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಜೈ ಶಂಕರ್ ಹಲವು ಕಾಲೇಜಿನ ವಿದ್ಯಾರ್ಥಿಗಳೋಂದಿಗೆ ಆಗಾಗ ಸಂವಾದದಲ್ಲಿ ಭಾಗಿಯಾಗುತ್ತಾರೆ ಕೂಡ. ಇನ್ನು ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ತೇಜಸ್ವಿನಿ ಅನಂತಕುಮಾರ್, ತೇಜಸ್ವಿ ಸೂರ್ಯ ಹೆಸರು ಕೂಡ ಕೇಳಿ ಬಂದಿದೆ.