Breaking News

ಬೆಳಗಾವಿಯಲ್ಲಿ ಮಹಾರಾಷ್ಟ್ರ ಆರೋಗ್ಯ ವಿಮೆ‌ ಜಾರಿ: ಕೆಎಲ್‌ಇ, ಅರಿಹಂತ ಆಸ್ಪತ್ರೆಗೆ ನೋಟಿಸ್

Spread the love

ಬೆಳಗಾವಿ, ಜನವರಿ 12: ಮಹಾರಾಷ್ಟ್ರ ಸರ್ಕಾರದ ಆರೋಗ್ಯ ವಿಮೆ‌ ಜಾರಿ‌ (Health Insurance) ವಿಚಾರವಾಗಿ ಬೆಳಗಾವಿಯ ಕೆಎಲ್‌ಇ ಹಾಗೂ ಅರಿಹಂತ ಆಸ್ಪತ್ರೆಗೆ ನೋಟಿಸ್ ಜಾರಿ ಮಾಡಲಾಗಿದೆ. ಮಹಾರಾಷ್ಟ್ರ (Maharashtra) ಆರೋಗ್ಯ ‌ವಿಮೆಯನ್ನು ಆರೋಗ್ಯ ಇಲಾಖೆ ಗಮನಕ್ಕೆ ತರದೇ ಅನುಷ್ಠಾನಗೊಳಿಸಿದ್ದಕ್ಕಾಗಿ ಡಿಎಚ್‌ಓ‌ ಡಾ.‌ ಮಹೇಶ್ ಕೋಣಿ ನೋಟಿಸ್ ಜಾರಿ ಮಾಡಿದ್ದಾರೆ. ಯಾವ ಕಾನೂನಿಡಿ ಮಹಾರಾಷ್ಟ್ರ ಆರೋಗ್ಯ ವಿಮೆಗೆ ಸಂಬಂಧಿಸಿ ಒಡಂಬಡಿಕೆ ಮಾಡಿಕೊಂಡಿದ್ದೀರಿ? ಅದರಡಿ ಇಲ್ಲಿಯ ವರೆಗೆ ‌ಚಿಕಿತ್ಸೆ ಪಡೆದವರ ಸಂಖ್ಯೆ ಎಷ್ಟು ಎಂದು ಪ್ರಶ್ನಿಸಿ ರೋಗಿಗಳ ವಿವಿರ ಸಮೇತ ಮಾಹಿತಿ ನೀಡಲು‌ ನೋಟಿಸ್​​ನಲ್ಲಿ ಸೂಚಿಸಲಾಗಿದೆ.

ನೋಟಿಸ್ ತಲುಪಿದ 24 ಗಂಟೆಯಲ್ಲಿ ಉತ್ತರ ನೀಡಬೇಕು ಎಂದೂ ಸೂಚಿಸಲಾಗಿದೆ. ಈ ಮಧ್ಯೆ, ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತೆ ಉದ್ಧಟತನ ತೋರಿದೆ.

ಮತ್ತೆ ಮಹಾರಾಷ್ಟ್ರ ಉದ್ಧಟತನ

ಗಡಿ ವಿವಾದ ಇರುವ 865 ಗ್ರಾಮಗಳ ಜನರಿಗೆ ಆರೋಗ್ಯ ವಿಮೆ ಜಾರಿ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಮಂಗೇಶ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಆರೋಗ್ಯ ಪರಿಹಾರ ನಿಧಿ ಯೋಜನೆ ಬಗ್ಗೆ ಈಗಾಗಲೇ ತಿಳಿಸಿದ್ದೇವೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿಯೂ ನಾವು ಮಾಹಿತಿ ನೀಡಿದ್ದೇವೆ. ಇದು ಗಡಿ ಭಾಗದ ಮರಾಠಿ ಭಾಷಿಕರಿಗಾಗಿ ಅನುಷ್ಠಾನ ಮಾಡ್ತಿದ್ದೇವೆ ಎಂದು ವಿಡಿಯೋ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಏಕನಾಥ ಶಿಂಧೆ ಸೂಚನೆ ಮೇರೆಗೆ ಯೋಜನೆ ಜಾರಿ ಮಾಡಿದ್ದೇವೆ. ಬೆಳಗಾವಿಯ ಅರಿಹಂತ ಆಸ್ಪತ್ರೆಗೆ 1 ಲಕ್ಷ ರೂ. ಸಂದಾಯ ಮಾಡಿದ್ದೇವೆ. ಮಹಾರಾಷ್ಟ್ರ ಸಿಎಂ ಪರಿಹಾರ ನಿಧಿಯಿಂದ 1 ಲಕ್ಷ ಹಣ ಸಂದಾಯ ಮಾಡಲಾಗಿದೆ. ಇದನ್ನು ಕನ್ನಡ ಪರ ಹೋರಾಟಗಾರರು ವಿರೋಧಿಸಿದ್ದಾರೆ. ಅಲ್ಲದೇ ಬೆಳಗಾವಿ ಜಿಲ್ಲಾಡಳಿತ ನಮಗೆ ನೋಟಿಸ್​ ಜಾರಿಗೊಳಿಸಿದೆ. ಕರ್ನಾಟಕ ಸರ್ಕಾರದ ಈ ನಿರ್ಧಾರ ಖಂಡಿಸುತ್ತೇವೆ. ಗಡಿ ಭಾಗದ ಜನರಿಗೆ ಈ ಯೋಜನೆ ವರವಾಗಿದೆ. ಇದನ್ನು ಕರ್ನಾಟಕ ಸರ್ಕಾರ ವಿರೋಧಿಸಬಾರದೆಂದು ಮಂಗೇಶ್ ಚಿವಟೆ ವಿಡಿಯೋ ಹೇಳಿಕೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ