ಬೆಂಗಳೂರು: ಲೋಕಸಭಾ(Loka Saba) ಚುನಾವಣೆಗೆ ಕಾಂಗ್ರೆಸ್‌ನಲ್ಲಿ(INC Karnataka) ತಯಾರಿ ಆರಂಭಗೊಂಡಿದ್ದು, ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಕೆಪಿಸಿಸಿ(KPCC) ಚುನಾವಣಾ ಸಮಿತಿ ಸಭೆ ನಡೆಸಲು ಕೈ ನಾಯಕರು ತಯಾರಿ ಮಾಡಿಕೊಂಡಿದ್ದಾರೆ.
ಜ. 19ರಂದು ಸಂಜೆ 4 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಚುನಾವಣಾ ಸಮಿತಿ ಸಭೆ ಆಯೋಜನೆ ಮಾಡಲಾಗಿದ್ದು, ಸಭೆಯಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಹರೀಶ್ ಚೌಧರಿ, ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಚುನಾವಣೆ ಸಮಿತಿ ಸದಸ್ಯರು ಭಾಗಿಯಾಗಲಿದ್ದಾರೆ. ಇವರೊಂದಿಗೆ ರಾಜ್ಯದ 28 ಲೋಕಸಭಾ ಕ್ಷೇತ್ರದ ಸಂಯೋಜಕರಾಗಿರುವ ಸಚಿವರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಈ ಮಹತ್ವದ ಸಭೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಸುಧೀರ್ಘ ಮಾತುಕತೆ ನಡೆಯುವ ಸಾಧ್ಯತೆ ಇದ್ದು, ಸಭೆಯಲ್ಲಿನ ಚರ್ಚೆ ಬಳಿಕ ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್‌ಗೆ ಕೆಪಿಸಿಸಿ ವತಿಯಿಂದ ಶಿಫಾರಸು ಮಾಡುವ ಸಾಧ್ಯತೆ ಇದೆ.