Breaking News
Home / ರಾಜಕೀಯ / ಲೋಕಸಮರಕ್ಕೆ ʻಕೈʼ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕು

ಲೋಕಸಮರಕ್ಕೆ ʻಕೈʼ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕು

Spread the love

ಬೆಂಗಳೂರು: ಲೋಕಸಭಾ(Loka Saba) ಚುನಾವಣೆಗೆ ಕಾಂಗ್ರೆಸ್‌ನಲ್ಲಿ(INC Karnataka) ತಯಾರಿ ಆರಂಭಗೊಂಡಿದ್ದು, ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಕೆಪಿಸಿಸಿ(KPCC) ಚುನಾವಣಾ ಸಮಿತಿ ಸಭೆ ನಡೆಸಲು ಕೈ ನಾಯಕರು ತಯಾರಿ ಮಾಡಿಕೊಂಡಿದ್ದಾರೆ.

 

ಜ. 19ರಂದು ಸಂಜೆ 4 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಚುನಾವಣಾ ಸಮಿತಿ ಸಭೆ ಆಯೋಜನೆ ಮಾಡಲಾಗಿದ್ದು, ಸಭೆಯಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಹರೀಶ್ ಚೌಧರಿ, ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಚುನಾವಣೆ ಸಮಿತಿ ಸದಸ್ಯರು ಭಾಗಿಯಾಗಲಿದ್ದಾರೆ. ಇವರೊಂದಿಗೆ ರಾಜ್ಯದ 28 ಲೋಕಸಭಾ ಕ್ಷೇತ್ರದ ಸಂಯೋಜಕರಾಗಿರುವ ಸಚಿವರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

 ಈ ಮಹತ್ವದ ಸಭೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಸುಧೀರ್ಘ ಮಾತುಕತೆ ನಡೆಯುವ ಸಾಧ್ಯತೆ ಇದ್ದು, ಸಭೆಯಲ್ಲಿನ ಚರ್ಚೆ ಬಳಿಕ ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್‌ಗೆ ಕೆಪಿಸಿಸಿ ವತಿಯಿಂದ ಶಿಫಾರಸು ಮಾಡುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ