Breaking News

ಮಹಾರಾಷ್ಟ್ರ: ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದ ಎನ್​​ಡಿಎ; ಸೀಟು ಹಂಚಿಕೆ ಕುರಿತು ಚರ್ಚೆ

Spread the love

ಮುಂಬೈ ಜನವರಿ 16: ಲೋಕಸಭಾ ಚುನಾವಣೆಗೆ (Lok sabaha Election) ದೇಶ ಸಜ್ಜಾಗಿದೆ. ಕಾಂಗ್ರೆಸ್ ನಾಯಕರಾಹುಲ್ ಗಾಂಧಿ(Rahul Gandhi) ಭಾರತ್ ಜೋಡೋ ನ್ಯಾಯ್ ಯಾತ್ರೆ ಕೈಗೊಂಡಿದ್ದಾರೆ.

ಇಂಡಿಯಾ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಕುರಿತು ಚರ್ಚೆ ಆರಂಭವಾಗಿದೆ. ಇದೇ ವೇಳೆ ಬಿಜೆಪಿ (BJP) ನೇತೃತ್ವದ ಎನ್‌ಡಿಎಯಿಂದ ಲೋಕಸಭೆ ಸ್ಥಾನಗಳ ಹಂಚಿಕೆ ಕುರಿತು ಮಾತುಕತೆ ನಡೆಯುತ್ತಿದೆ. ಎನ್‌ಡಿಎಯಲ್ಲಿರುವ ಬಿಜೆಪಿ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದೆ.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಕಾರ್ಯತಂತ್ರವನ್ನು ಸಿದ್ಧಪಡಿಸಲು ಮಂಗಳವಾರ ಮಹತ್ವದ ಸಭೆ ಕರೆದಿದ್ದಾರೆ.

ಈ ಸಭೆಯಲ್ಲಿ ಮಹಾರಾಷ್ಟ್ರದಲ್ಲಿ (Maharashtra) ಸೀಟು ಹಂಚಿಕೆ ಕುರಿತು ಚರ್ಚೆ ನಡೆಯಲಿದೆ. 32 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ