Breaking News

ಹಾನಗಲ್‌ ಅತ್ಯಾಚಾರ ಕೇಸ್‌ ಮುಚ್ಚಿ ಹಾಕಲು ಲೈಸೆನ್ಸ್‌ ಕೊಟ್ಟ ಸಿದ್ದರಾಮಯ್ಯ; ಬೊಮ್ಮಾಯಿ ಕಿಡಿ

Spread the love

ಬೆಂಗಳೂರು: ಹಾನಗಲ್‌ನ (Hanagal Case) ಮಹಿಳೆಯ ಮೇಲೆ ನಡೆಸಲಾಗಿರುವ ಸಾಮೂಹಿಕ ಅತ್ಯಾಚಾರ (Gang Rape) ಪ್ರಕರಣವನ್ನು ಎಸ್‌ಐಟಿಗೆ ವಹಿಸಲು ಸಿಎಂ ಸಿದ್ದರಾಮಯ್ಯ (CM Siddaramaiah) ನಿರಾಕರಣೆ ಮಾಡುವ ಮೂಲಕ ಈ ಕೇಸ್‌ ಅನ್ನು ಮುಚ್ಚಿಹಾಕುವ ಸ್ಥಳೀಯ ಪೊಲೀಸರ ಪ್ರಯತ್ನಕ್ಕೆ ಲೈಸೆನ್ಸ್ ಕೊಟ್ಟಂತಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದ್ದಾರೆ.

 

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಆಕ್ರೋಶವನ್ನು ಹೊರಹಾಕಿರುವ ಬಸವರಾಜ ಬೊಮ್ಮಾಯಿ, ಸಂತ್ರಸ್ತ ಮಹಿಳೆಗೆ ನ್ಯಾಯಕೊಡಿಸುವ ಉದ್ದೇಶ ಇದ್ದರೆ ಕೂಡಲೆ ಎಸ್‌ಐಟಿ ರಚನೆ ಮಾಡಬೇಕೆಂದು ಆಗ್ರಹಿಸುವುದಾಗಿ ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿ ಪೋಸ್ಟ್‌ನಲ್ಲೇನಿದೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್‌ಐಟಿ ರಚಿಸಲು ನಿರಾಕರಣೆ ಮಾಡಿರುವುದು ಖಂಡನೀಯ. ಇದು ಒಂದು ರೀತಿಯಲ್ಲಿ ಈಗಾಗಲೇ ಕೇಸ್ ತಿರುಚುವ ಮುಖಾಂತರ ಸ್ಥಳೀಯ ಪೊಲೀಸರು ಮುಚ್ಚಿಹಾಕುವ ಪ್ರಯತ್ನ ಮಾಡುವುದಕ್ಕೆ ಲೈಸೆನ್ಸ್ ಕೊಟ್ಟಂತಾಗಿದೆ. ಮುಖ್ಯಮಂತ್ರಿಗಳ ಈ ನಿಲುವನ್ನು ಖಂಡಿಸುತ್ತೇನೆ. ಅವರಿಗೆ ಸಂತ್ರಸ್ತ ಮಹಿಳೆಗೆ ನ್ಯಾಯಕೊಡಿಸುವ ಉದ್ದೇಶ ಇದ್ದರೆ ಕೂಡಲೆ ಎಸ್‌ಐಟಿ ರಚನೆ ಮಾಡಬೇಕೆಂದು ಆಗ್ರಹಿಸುತ್ತೇನೆ.

ಹಾವೇರಿ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆಗೆ ಸರಿಯಾದ ವೈದ್ಯಕೀಯ ಚಿಕಿತ್ಸೆ ಇಲ್ಲದೆ ಮನೆಗೆ ಕಳಿಸಿರುವುದಕ್ಕೆ ಸಿಎಂ ಬಳಿ ಉತ್ತರ ಇಲ್ಲ. ಹಾಗೂ ಅವಳಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಲು ಕಾಂಗ್ರೆಸ್ ಪಕ್ಷದ ಶಾಸಕರಿಗೆ ಹೇಳಿರುವುದು. ಸರ್ಕಾರ ಇಷ್ಟು ದೊಡ್ಡ ಆರೋಗ್ಯ ಇಲಾಖೆ ಇದ್ದು, ಅವಳಿಗೆ ಸೂಕ್ತ ಚಿಕಿತ್ಸೆ ಕೊಡಲು ತಯಾರಿಲ್ಲ ಎಂದರೆ? ಅಲ್ಲದೆ, ಆ ಜವಾಬ್ದಾರಿಯನ್ನು ತಮ್ಮ ಶಾಸಕರಿಗೆ ವಹಿಸಿರುವಂಥದ್ದು ಈ ಪ್ರಕರಣವನ್ನು ಮುಚ್ಚಿ ಹಾಕುವ ಹಾಗೂ ಆ ಹೆಣ್ಣು ಮಗಳನ್ನು ಸಂಪೂರ್ಣ ಹತೋಟಿಗೆ ತೆಗೆದುಕೊಳ್ಳುವ ತಂತ್ರ ಎಂಬುದು ಗೊತ್ತಾಗುತ್ತದೆ. ಆದ್ದರಿಂದ ಅವಳಿಗೆ ಚಿಕಿತ್ಸೆಯನ್ನು ಸಂಪೂರ್ಣ ಸರ್ಕಾರಿ ವ್ಯವಸ್ಥೆಯಲ್ಲಿಯೇ ನೀಡಬೇಕು” ಎಂದು ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

Spread the love ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ