Breaking News

ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಟೆಕ್ಕಿ ಆತ್ಮಹತ್ಯೆ

Spread the love

ಮಡಿಕೇರಿ: ಬೆಂಗಳೂರು ಮೂಲದ ಸಾಫ್ಟ್‌ ವೇರ್‌ ಎಂಜಿನಿಯರ್‌ (Software Engineer) ಒಬ್ಬರು ಮಡಿಕೇರಿಯ ಹೋಟೆಲ್‌ನಲ್ಲಿ (Lodge in Madikeri) ನೇಣು ಬಿಗಿದುಕೊಂಡು ಪ್ರಾಣಬಿಟ್ಟಿದ್ದಾರೆ (Self Harming). ಬೆಂಗಳೂರಿನ ಸಂದೇಶ್ (35) ಅತ್ಮಹತ್ಯೆಗೆ ಶರಣಾದವರು.

 

ಕಳೆದ 2 ದಿನಗಳಿಂದ ಹೊಟೆಲ್‌ನಲ್ಲಿ ತಂಗಿದ್ದ ಸಂದೇಶ್ ಅವರು ಕಿಟಕಿಯ ಸರಳಿಗೆ ಬಟ್ಟೆಯನ್ನೇ ನೇಣಾಗಿ ಮಾಡಿಕೊಂಡು ಮೃತಪಟ್ಟಿದ್ದಾರೆ. ಮಂಗಳವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದ್ದು, ಕೋಣೆಯಲ್ಲಿ ಡೆತ್‌ ನೋಟ್‌ ಕೂಡಾ ಸಿಕ್ಕಿದೆ. ಅದರಲ್ಲಿ ನನ್ನ ಸಾವಿಗೆ ಯಾರೂ ಕಾರಣರಲ್ಲ, ಎಲ್ಲರಿಗೂ ಗುಡ್‌ ಬೈ, ಯಾರೂ ಬೇಸರ ಮಾಡಬಾರದು ಎಂದು ಬರೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆ.

ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಯುವಕನ ಮನೆಯವರಿಗೆ ಮಾಹಿತಿ ನೀಡಲಾಗಿದ್ದು, ಶವವನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ