Breaking News

ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ, ವೈದ್ಯಕೀಯ ವೆಚ್ಚ 1,500 ರೂ.ಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ

Spread the love

ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು ಮತ್ತು ವೈದ್ಯಕೀಯ ವೆಚ್ಚವನ್ನು 1 ಸಾವಿರದಿಂದ 1,500 ರೂ.ಗೆ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಘೋಷಿಸಿದ್ದಾರೆ. ಬೆಂಗಳೂರು: ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು ಮತ್ತು ವೈದ್ಯಕೀಯ ವೆಚ್ಚವನ್ನು 1 ಸಾವಿರದಿಂದ 1,500 ರೂ.ಗೆ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಘೋಷಿಸಿದ್ದಾರೆ.
ರಾಜ್ಯದಲ್ಲಿ ಭವ್ಯವಾದ ಸುಸಜ್ಜಿತ ಸುವರ್ಣ ಪೊಲೀಸ್ ಭವನ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಬಜೆಟ್ ನಲ್ಲಿ ಹಣ ನಿಗದಿ ಮಾಡುತ್ತೇನೆ. ಸಿಇಎನ್ ಠಾಣಾಧಿಕಾರಿಗಳ ಹುದ್ದೆಯನ್ನು ಎಸಿಪಿ ಮತ್ತು ಡಿಸಿಪಿ ಮಟ್ಟಕ್ಕೆ ಉನ್ನತೀಕರಿಸಲಾಗುವುದು ಮತ್ತು ಬೆಂಗಳೂರು ನಗರದಲ್ಲಿ 8 ಅಡಿಷನಲ್ ಡಿಸಿಪಿ ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಜಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ಇಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.

Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ