Breaking News

ಟೆಂಟ್​​ನಲ್ಲಿ 2 ಗೊಂಬೆ ಇಟ್ಟು ರಾಮ, ರಾಮ ಎನ್ನುತ್ತಿದ್ದರು: ಅಯೋಧ್ಯೆ ಬಗ್ಗೆ ಸಚಿವ ರಾಜಣ್ಣ ವಿವಾದಿತ ಹೇಳಿಕೆ

Spread the love

ತುಮಕೂರು, ಜನವರಿ 16: ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಸಹಕಾರ ಸಚಿವ ಕೆಎನ್ ರಾಜಣ್ಣ (KN Rajanna) ಅಯೋಧ್ಯೆ (Ayodhya)ರಾಮಲಲ್ಲಾ (Ram Lalla) ಬಗ್ಗೆ ನೀಡಿರುವ ಹೇಳಿಕೆ ವಿವಾದಕ್ಕೆ ಗ್ರಾಸವಾಗಿದೆ. ತುಮಕೂರಿನಲ್ಲಿ ಮಂಗಳವಾರ ನಡೆದ ಹಿಂದುಳಿದ ವರ್ಗಗಳ ಒಕ್ಕೂಟದ ಸಮಾರಂಭದಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಕೆಡವಿದ್ದ ನಂತರ ಅಲ್ಲಿಗೆ ಹೋಗಿದ್ದೆ. ಗುಡಿಯೊಂದರಲ್ಲಿ ಎರಡು ಗೊಂಬೆಗಳನ್ನಿಟ್ಟು ರಾಮ ರಾಮ ಎನ್ನುತ್ತಿದ್ದರು. ನಮ್ಮೂರಿನ ದೇವಸ್ಥಾನಗಳಿಗೆ ಹೋದಾಗ ಸಿಗುವ ಭಕ್ತಿಯ ಮತ್ತು ಧನಾತ್ಮಕ ಅನುಭೂತಿ ಅಲ್ಲಿರಲಿಲ್ಲ. ಅಯೋಧ್ಯೆಯ ರಾಮಲಲ್ಲಾನ ಬಗ್ಗೆ ನನಗೆ ಏನೂ ಅನಿಸಲೇ ಇಲ್ಲ ಎಂದು ಹೇಳಿದ್ದಾರೆ.

ನಮ್ಮಲ್ಲಿ ಸಾವಿರಾರು ವರ್ಷಗಳ ಇತಿಹಾಸವಿರುವ ಅನೇಕ ರಾಮ ದೇಗುಲಗಳಿವೆ. ಆದರೆ, ಬಿಜೆಪಿ ಚುನಾವಣೆಗಾಗಿ ದೇಗುಲ ಕಟ್ಟುತ್ತಿದೆ. ಬಿಜೆಪಿ ಜನರನ್ನು ಮೋಸ ಮಾಡುತ್ತಿದೆ ಎಂದು ರಾಜಣ್ಣ ಟೀಕಿಸಿದ್ದಾರೆ. ರಾಜಣ್ಣ ಹೇಳಿಕೆಗೆ ಇದೀಗ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿದೆ.

ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ರಾಮಮಂದಿರದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಜನವರಿ 22 ರಂದು ನಡೆಯಲಿರುವ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಿಂದ ಹೊರಗುಳಿಯಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ