Breaking News

ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು: ಸಿಎಂ

Spread the love

ಬೆಳಗಾವಿ: ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವುದು ಸರಿಯಲ್ಲ. ಮಹಾರಾಷ್ಟ್ರ ಕರ್ನಾಟಕದೊಳಗೆ (Maharashtra Karnataka border) ಬರಬಾರದು ಎಂದು ಮುಖ್ಯ ಕಾರ್ಯದರ್ಶಿಗಳು ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

 

ಬುಧವಾರ ಬೈಲಹೊಂಗಲ ತಾಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನೆಗೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು 65% ರಷ್ಟು ಹಾಗೂ ಇತರರಿಗೆ ಶೇ. 35ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲಾಗುವುದು. ಇಲ್ಲಿ ಕಲಿತವರು ಸೇನೆಗೆ ಸೇರ್ಪಡೆಯಾಗುವ ಅವಕಾಶವಿದೆ ಎಂದರು.


Spread the love

About Laxminews 24x7

Check Also

ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಆದೇಶ ನೀಡಿದೆ.

Spread the loveಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ