ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಲೋಕಸಭೆ ಚುನಾವಣೆಯನ್ನು ಎದುರಿಸುತ್ತೇವೆ.:ಡಿ.ಕೆ. ಶಿ
Laxminews 24x7
ಜನವರಿ 17, 2024
ರಾಜಕೀಯ, ರಾಜ್ಯ, ರಾಷ್ಟ್ರೀಯ
108 Views
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಲೋಕಸಭೆ ಚುನಾವಣೆಯನ್ನು ಎದುರಿಸುತ್ತೇವೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಲೋಕಸಭೆ ಚುನಾವಣೆಯನ್ನು ಎದುರಿಸುತ್ತೇವೆ.
ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನ ಗಳಿಸಿದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸಿಎಂ ಪುತ್ರ ಯತೀಂದ್ರ ಅವರು ಹೇಳಿದ್ದು, ಈ ಹೇಳಿಕೆ ಕಾಂಗ್ರೆಸ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.
ಡಾ. ಯತೀಂದ್ರಈ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು, ಅವರ(ಸಿದ್ದರಾಮಯ್ಯ) ನಾಯಕತ್ವದಲ್ಲೇ ಚುನಾವಣೆ ನಡೆಯುತ್ತೆ.
ಅದರಲ್ಲಿ ಅನುಮಾನ ಬೇಡ ಎಂದರು. ನಮ್ಮ ಸರ್ಕಾರ ಬಲಿಷ್ಠವಾಗಿದೆ. ಅದನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಸಿದ್ದರಾಮಯ್ಯ ನಮ್ಮ ರಾಜ್ಯದ ಮುಖ್ಯಮಂತ್ರಿ.
ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ನಾವಿಬ್ಬರು ಸೇರಿ ಒಟ್ಟಿಗೆ ಚುನಾವಣೆ ಮಾಡುತ್ತೇವೆ. ಆದ್ರೆ, ಅವರ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತೆ. ಅದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು.