ಮಂಡ್ಯ: ಮುಸ್ಲಿಮ್ ಮಹಿಳೆಯರ ವಿರುದ್ಧ ಅವಹೇಳನಕಾರಿ (Defamatory Statement) ಹೇಳಿಕೆ ನೀಡಿದ ಆರೋಪ ಹೊತ್ತಿರುವ RSS ಮುಖಂಡ ಕಲ್ಲಡ್ಕ ಪ್ರಭಾಕರ್‌ಗೆ (Kalladka Prabhakar Bhat) ಶ್ರೀರಂಗಪಟ್ಟಣ ಕೋರ್ಟ್‌ನಿಂದ ಜಾಮೀನು ಮಂಜೂರಾಗಿದೆ.
ಹನುಮ ಜಯಂತ್ಯುತ್ಸವದ ಅಂಗವಾಗಿ ಡಿಸೆಂಬರ್ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆಯು ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಯಲ್ಲಿ ಪ್ರಭಾಕರ್ ಭಟ್ ಮುಸ್ಲಿಮರ ವಿರುದ್ಧ ಧಾರ್ಮಿಕ ದ್ವೇಷಕಾರಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ನೀಡಿದ್ದರು.
ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಚಾರ್ಜ್ ಶೀಟ್ ಅನ್ನು ಕೋರ್ಟ್‌ಗೆ ಪೊಲೀಸರು ಸಲ್ಲಿಸಿದ್ದರು. ಘಟನೆಯ ಅರ್ಜಿ ವಿಚಾರಣೆ ಇಂದು ನಡೆದಿದ್ದು, ವಿಚಾರಣೆ ಬಳಿಕ ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ. ಕಲ್ಲಡ್ಕ ಪರ ವಕೀಲ ಚಂದ್ರೇಗೌಡ ವಾದ ಮಂಡಿಸಿದ್ದಾರೆ.
Laxmi News 24×7