Breaking News

ಮೈಸೂರು ಸ್ಯಾಂಡಲ್ ನಕಲಿ​ ಸೋಪ್ ತಯಾರಿಕೆ: ಪ್ರಕರಣದ ಇಬ್ಬರು ಆರೋಪಿಗಳು ಬಿಜೆಪಿ ನಾಯಕರು-ಪ್ರಿಯಾಂಕ್​ ಖರ್ಗೆ

Spread the love

ಬೆಂಗಳೂರು, ಜನವರಿ 17: ಹೈದರಾಬಾದ್​ನಲ್ಲಿಮೈಸೂರು ಸ್ಯಾಂಡಲ್(Mysore Sandal Soap) ನಕಲಿ​ ಸೋಪ್ ತಯಾರಿಕೆ ಘಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಇಬ್ಬರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಕಾರ್ಖಾನೆ ನಡೆಸುತ್ತಿದ್ದ ರಾಕೇಶ್ ಜೈನ್, ಮಹಾವೀರ್ ಜೈನ್ ಎಂಬುವವರ ಮೇಲೆ ಎಫ್‌ಐಆರ್ ದಾಖಲಾಗಿದೆ. ಆರೋಪಿತ ಜೈನ್​ಗಳಿಬ್ಬರೂ ಕೂಡ ಬಿಜೆಪಿಯ ಸಕ್ರಿಯ ನಾಯಕರು, ಕಾರ್ಯಕರ್ತರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಬಿಜೆಪಿಯ ರಾಜಾ ಸಿಂಗ್ ಜೊತೆಗೆ ನಿಕಟ ಸಂಪರ್ಕದಲ್ಲಿ ಇದ್ದಾರೆ ಎಂದು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆರೋಪ ಮಾಡಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವ ಎಂಬಿ ಪಾಟೀಲ್ ಅವರಿಗೆ ಅನಾಮಿಕನೊಬ್ಬ ಕರೆ ಮಾಡುತ್ತಾನೆ. ಮೈಸೂರು ಸ್ಯಾಂಡಲ್ ನಕಲಿ​ ಸೋಪ್ ಮಾರಾಟದ ಬಗ್ಗೆ ಮಾಹಿತಿ ನೀಡುತ್ತಾನೆ. ಎಂ.ಬಿ ಪಾಟೀಲ್​ ಅವರು ಇಲ್ಲಿನ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟದ ವ್ಯವಸ್ಥಾಪಕ ನಿರ್ದೇಶಕರಿಗೆ ಮಾಹಿತಿ ನೀಡುತ್ತಾರೆ. ನಂತರ ನಮ್ಮ ಅಧಿಕಾರಿಗಳು ನಕಲಿ ಸೋಪ್ ತಯಾರಿಕೆ ಮತ್ತು ಮಾರಾಟ ಜಾಲ ಪತ್ತೆ ಹಚ್ಚಲು ಮುಂದಾದರು ಎಂದು ತಿಳಿಸಿದರು.

ಬಳಿಕ ನಮ್ಮ ಅಧಿಕಾರಿಗಳು ಹೈದರಾಬಾದ್​ಗೆ ತೆರಳಿ 25 ಲಕ್ಷ ರೂ. ಆರ್ಡರ್ ಇದೆ ಅಂತ ಹೇಳುತ್ತಾರೆ. ಬಹಳ ದೊಡ್ಡ ಆರ್ಡರ್ ಇರುವುದರಿಂದ ಕಾರ್ಖಾನೆಗೆ ಬರುತ್ತೇವೆ ಎಂದು ನಮ್ಮ ಅಧಿಕಾರಿಗಳು ಹೇಳುತ್ತಾರೆ. ಬಹಳ ಸೂಕ್ಷ್ಮವಾಗಿ ಈ ಕಾರ್ಯಾಚರಣೆ ನಡೆಯುತ್ತದೆ. ನಕಲಿ ಎಂದು ಖಚಿತವಾದ ಮೇಲೆ, ನಮ್ಮ ಅಧಿಕಾರಿಗಳು ಕಾರ್ಖಾನೆ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ನಕಲಿ ಸೋಪ್​ ಮತ್ತು ಕವರ್​ಗಳು ಪತ್ತೆಯಾಗಿವೆ ಎಂದರು.

ಪ್ರಕರಣ ಸಂಬಂಧ ರಾಕೇಶ್ ಜೈನ್, ಮಹಾವೀರ್ ಜೈನ್ ಎಂಬುವವರ ಮೇಲೆ ಎಫ್‌ಐಆರ್ ದಾಖಲಾಗಿದೆ. ಚಿತ್ತಾಪುರದ ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಹಾಗೂ ಮಾಜಿ ಶಾಸಕರ ಪುತ್ರನ ಜೊತೆ ಆರೋಪಿತರ ಸಂಪರ್ಕವಿದೆ. ಕಾರ್ಯಾಚರಣೆ ನಡೆದಿರುವುದು ರಾಜ್ಯದ ಆಸ್ತಿ ಉಳಿಸಿಕೊಳ್ಳುವುದಕ್ಕಾಗಿ. ಇದರಲ್ಲಿ ಬಿಜೆಪಿ ನಾಯಕರು ಶಾಮೀಲಾಗಿದ್ದಾರೆ. ಬಿಜೆಪಿಯವರು ದುಡ್ಡು ಮಾಡುವುದಕ್ಕೆ ಯಾವುದಕ್ಕೂ ಹೇಸುವುದಿಲ್ಲ ಎಂದು ವಾಗ್ದಾಳಿ ಮಾಡಿದರು.


Spread the love

About Laxminews 24x7

Check Also

ಏರ್​ಗನ್​ನಿಂದ ಹಾರಿದ ಗುಂಡು: ಶಿರಸಿಯಲ್ಲಿ 9 ವರ್ಷದ ಬಾಲಕ ಸಾವು

Spread the love ಶಿರಸಿ(ಉತ್ತರಕನ್ನಡ): ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕನ ಕೈಯ್ಯಿಂದ ಏರ್​ಗನ್​ ಗುಂಡು ಹಾರಿ ಇನ್ನೊಂದು ಬಾಲಕ ಮೃತಪಟ್ಟ ಹೃದಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ