Breaking News

ದೇಶಪ್ರೇಮ, ದೇಶ ಭಕ್ತಿ ಬರೀ ಭಾಷಣಕ್ಕೆ ಸೀಮಿತವಾಗಿದೆ, ಅಧಿಕಾರದಲ್ಲಿರುವವರು ಸ್ವಾತಂತ್ರ್ಯಕ್ಕೆ ಹೋರಾಡಿದ್ರಾ? ಬಿಜೆಪಿಗೆ ಸಿಎಂ ಟಾಗ್

Spread the love

ಬೆಳಗಾವಿ, ಜನವರಿ 17: ದೇಶಪ್ರೇಮ, ದೇಶ ಭಕ್ತಿ ಬರೀ ಭಾಷಣಕ್ಕೆ ಸೀಮಿತವಾಗಿದೆ. ಇಂದು ಅಧಿಕಾರದಲ್ಲಿರುವವರು ಸ್ವಾತಂತ್ರ್ಯಕ್ಕೆ ಹೋರಾಡಿದ್ರಾ? ಅವರು ಎಂದಾದರೂ ತ್ಯಾಗ, ಬಲಿದಾನ ಮಾಡಿದ್ದಾರೆಯೇ ಎಂದು ಸಿಎಂ ಸಿದ್ದರಾಮಯ್ಯ(Siddaramaiah)ಬಿಜೆಪಿಗೆ ಟಾಂಗ್​ ನೀಡಿದ್ದಾರೆ. ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಸಂಗೊಳ್ಳಿ ರಾಯಣ್ಣ ಉತ್ಸವದಲ್ಲಿ ಮಾತನಾಡಿದ ಅವರು, ಸಿಪಾಯಿ ದಂಗೆಗೂ ಮೊದಲು ಟಿಪ್ಪು ಸುಲ್ತಾನ್, ವೆಂಕಟಪ್ಪ ನಾಯಕ, ಕಿತ್ತೂರು ಚೆನ್ನಮ್ಮ, ರಾಯಣ್ಣ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು. ಇದನ್ನು ನಾವು ಯಾರೂ ಮರೆಯಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಬಿಜೆಪಿಯವರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಸರ್ಕಾರದ ವತಿಯಿಂದ ಸೈನಿಕ ಶಾಲೆ

ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಸೈನಿಕ ಶಾಲೆಯನ್ನ ಸರ್ಕಾರ ನಿರ್ಮಿಸಿದೆ. ಯುವಕ, ಯುವತಿಯರಿಗೆ ರಾಯಣ್ಣ ಸೈನಿಕ ಶಾಲೆ ಸ್ಫೂರ್ತಿಯಾಗಬೇಕು. ದೇಶಭಕ್ತಿಯಿಂದ ವಿಮುಕ್ತರಾಗಬಾರದು ಎಂದು ಸೈನಿಕ ಶಾಲೆ ಸ್ಥಾಪನೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಾಧಿಕಾರ ರಚನೆ ಬಳಿಕ ರಾಯಣ್ಣ ಹೆಸರು ಶಾಶ್ವತವಾಗಿ ಇರಬೇಕು. ಪ್ರಾಧಿಕಾರಕ್ಕೆ ಅಂದು ನಮ್ಮ ಸರ್ಕಾರ 100 ಎಕರೆ ಜಮೀನು ನೀಡಿತ್ತು ಎಂದು ಹೇಳಿದ್ದಾರೆ.

ಸಂಗೊಳ್ಳಿ ರಾಯಣ್ಣ ಶೌರ್ಯವಂತ, ಶೂರನಾಗಿದ್ದರು, ದೇಶ ಭಕ್ತಿ ಇಟ್ಟುಕೊಂಡಿದ್ದರು. 267 ಕೋಟಿ ರೂ. ಖರ್ಚು ಮಾಡಿ ಸೈನಿಕ ಶಾಲೆ, ರಾಕ್ ಗಾರ್ಡನ್, ಸಮಾಧಿ ಅಭಿವೃದ್ಧಿ ಮಾಡಲಾಗಿದೆ. 2018ರಲ್ಲಿ ಘೋಷಣೆ ಮಾಡಿ ನಾನೇ ಇಲ್ಲಿಗೆ ಬಂದು ಶಂಕುಸ್ಥಾಪನೆ ನೆರವೇರಿಸಿದ್ದೆ. ಈಗ 230 ವಿದ್ಯಾರ್ಥಿಗಳು ಈಗ ಕಲಿಯುತ್ತಿದ್ದು ಬಹಳ ಸಂತೋಷ ಆಗುತ್ತಿದೆ ಎಂದಿದ್ದಾರೆ.


Spread the love

About Laxminews 24x7

Check Also

ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಆದೇಶ ನೀಡಿದೆ.

Spread the loveಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ