Breaking News

ನಿದ್ದೆ ಮಾಡುವುದಕ್ಕೆ ನೀವೇ ಬ್ರ್ಯಾಂಡ್ ಅಂಬಾಸಿಡರ್, ನಿದ್ದೆರಾಮಯ್ಯ ಎಂದೇ ನಿಮಗೆ ಹೆಸರಿದೆ: ಆರ್ ಅಶೋಕ್

Spread the love

ಬೆಂಗಳೂರು, ಜ.17: ಪ್ರಧಾನಿಯ ಗಾಢ ನಿದ್ರೆ, ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ ಎಂದು ಬರೆದು ನಿನ್ನೆ ಸಿಎಂ ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರ ಮೋದಿ (Narendra Modi) ನಿದ್ದೆ ಮಾಡುವ ರೀತಿಯ ಫೋಟೋ ಟ್ವೀಟ್ ಮಾಡಿದ್ದರು. ಇದಕ್ಕೆ ಬಿಜೆಪಿ ಕೂಡ ಟ್ವೀಟ್ ಮೂಲಕ ತಿರುಗೇಟು ನೀಡಿತ್ತು. ಸುಳ್ಳು ಹೇಳುವುದು, ಜನರನ್ನು ವಂಚಿಸುವುದು, ಫೇಕ್ ಸುದ್ದಿ ಸೃಷ್ಟಿಸುವುದು, ಇದೆಲ್ಲವೂ ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಚೆನ್ನಾಗಿಯೇ ‘ಸಿದ್ದಿ’ಸಿದೆ ಎಂದು ಬಿಜೆಪಿ (BJP) ವ್ಯಂಗ್ಯವಾಡಿತ್ತು. ಸದ್ಯ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್​ಗೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ (R Ashok) ತಿರುಗೇಟು ನೀಡಿದ್ದಾರೆ. ಜನ ನಿಮ್ಮನ್ನು ಮುಂದೆ ನಿದ್ರೆಗೆ ಬ್ರ್ಯಾಂಡ್ ಮಾಡುತ್ತಾರೆ ನೋಡಿ ಎಂದು ಕೌಂಟರ್ ಕೊಟ್ಟಿದ್ದಾರೆ.

ಕಾರ್ಯಕ್ರಮಗಳಲ್ಲಿ ಪ್ರಧಾನಿ ನಿದ್ದೆ ಮಾಡ್ತಿರುವ ಒಂದು ದಾಖಲೆ ಕೊಡಿ. ಸಿದ್ದರಾಮಯ್ಯ ಮಲಗಿರೋದಕ್ಕೆ ಸಾಕ್ಷಿ ಇದೆ. ಇತರರು ಬಂದು ಎದ್ದೇಳಣ್ಣೋ ಸಿದ್ರಾಮಣ್ಣ ಅಂತಾ ಎಚ್ಚರಿಸಿದ್ದಾರೆ. ಮೋದಿ ಹಾಗೇ ಮಲಗಿರೋದು ಒಂದು ಫೋಟೋ ತೋರಿಸಿ. ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಅವಧಿ ಕೆಲಸ‌ ಮಾಡಿದ್ದಾರೆ. ನೀವು 5 ತಾಸು ಕೆಲಸ ಮಾಡಲ್ಲ, ನಿಮ್ಮಿಂದ ಅಭಿವೃದ್ಧಿ ಮಾಡಲಾಗಿಲ್ಲ. ಅಭಿವೃದ್ಧಿ ಮಾಡುವವರನ್ನು ಸಿದ್ದರಾಮಯ್ಯನವರು ಟೀಕೆ‌ ಮಾಡ್ತಾರೆ. ಮಲಗಿರುವ ಒಂದು ಫೋಟೋ ನಿಮ್ಮ ಮನೆಯಲ್ಲಿ ಹಾಕಿಕೊಳ್ಳಿ. ನಿದ್ದೆರಾಮಯ್ಯ ಅಂತಾನೇ ನಿಮಗೆ ಹೆಸರಿದೆ ಎಂದು ಅಶೋಕ್ ಕಿಡಿ ಕಾರಿದ್ದಾರೆ. ನಿದ್ದೆರಾಮಯ್ಯ ಅಂತಾ ನಿಮಗೆ ಹೆಸರಿದೆಯೋ ಅಥವಾ ಮೋದಿಗೋ? ನಿದ್ದೆ ಮಾಡುವುದಕ್ಕೆ ನೀವೇ ಬ್ರ್ಯಾಂಡ್ ಅಂಬಾಸಿಡರ್. ಜನ ನಿಮ್ಮನ್ನು ಮುಂದೆ ನಿದ್ರೆಗೆ ಬ್ರ್ಯಾಂಡ್ ಮಾಡುತ್ತಾರೆ ನೋಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್​ಗೆ ಆರ್​.ಅಶೋಕ್ ತಿರುಗೇಟು ನೀಡಿದ್ದಾರೆ.

 

 

ವರಿಷ್ಠರು ಕೂಡ ಮೈತ್ರಿ ಬಗ್ಗೆ ಕೆಲವು ತೀರ್ಮಾನಗಳನ್ನು ಮಾಡಿದ್ದಾರೆ

ಇನ್ನು ಇದೇ ವೇಳೆ ಆರ್​.ಅಶೋಕ್​ ಅವರು ಚುನಾವಣೆ ಸಂಬಂಧ ಪ್ರತಿಕ್ರಿಯೆ ನೀಡಿದ್ದಾರೆ. ಲೋಕಸಭೆ ಕ್ಷೇತ್ರಗಳಿಗೆ ಚುನಾವಣಾ ಉಸ್ತುವಾರಿಗಳ ನೇಮಕ ಆಗಲಿದೆ. ದೆಹಲಿಯಲ್ಲಿ ನಡ್ಡಾ ಭೇಟಿ ಮಾಡಿ ರಾಜ್ಯದ ಬಗ್ಗೆ ಚರ್ಚೆ ನಡೆಸಿದ್ದೇನೆ. ಹೆಚ್ಚು ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ನಾನೂ ಕೆಲವು ಮನವಿ ಮಾಡಿದ್ದೇನೆ. ವರಿಷ್ಠರು ಕೂಡ ಮೈತ್ರಿ ಬಗ್ಗೆ ಕೆಲವು ತೀರ್ಮಾನಗಳನ್ನು ಮಾಡಿದ್ದಾರೆ. ಪ್ರತಿ ವಿಧಾನಸಭೆ ಕ್ಷೇತ್ರಗಳಿಗೂ ಉಸ್ತುವಾರಿಗಳ ನೇಮಕ ಆಗಲಿದೆ. ಬಿ.ಎಲ್.ಸಂತೋಷ್​​ರನ್ನೂ ಭೇಟಿಯಾಗಿ ಅರ್ಧ ಗಂಟೆ ಚರ್ಚಿಸಿದ್ದೇನೆ. ಕೇಂದ್ರ ಸಚಿವರ ಜತೆ ರಾಜ್ಯದ ಸಮಸ್ಯೆ, ಅನುದಾನ ಬಗ್ಗೆಯೂ ಚರ್ಚೆ ಆಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಕಳೆದ 7 ತಿಂಗಳಿಂದ ರಾಜ್ಯದಲ್ಲಿ ಕೊಲೆ, ಗಲಾಟೆ ನಡೆಯುತ್ತಿದೆ ಎಂದರು.

ಪ್ರಧಾನಿಯನ್ನು ಟೀಕಿಸಿದ್ದ ಸಿಎಂ ಸಿದ್ದರಾಮಯ್ಯ

ಪ್ರಧಾನಿಯ ಗಾಢ ನಿದ್ರೆ, ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ. ತನಗೆ ತಾನೇ ಪ್ರಚಾರ ಕೊಟ್ಟುಕೊಳ್ಳಲು ಹಾಗೂ ಬಿಜೆಪಿಗಾಗಿ ಪ್ರಚಾರ ಮಾಡಲು ಸದಾ ಎದ್ದಿರುವ ನರೇಂದ್ರ ಮೋದಿ ಅವರು ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಯಾವಾಗಲೂ ತೂಕಡಿಸುತ್ತಿರುತ್ತಾರೆ. ಎದ್ದೇಳಿ, ಪ್ರಧಾನಮಂತ್ರಿಯವರೇ! ಕರ್ನಾಟಕದ ನ್ಯಾಯಯುತ ಪಾಲನ್ನು ಕೊಡಬೇಕಾದ ಸಮಯವಿದು ಎಂದು ಸಿಎಂ ಸಿದ್ದರಾಮಯ್ಯನವರು ಪ್ರಧಾನಿ ನಿದ್ರಿಸುವಂತೆ ಫೋಟೋಗಳನ್ನು ಟ್ವೀಟ್ ಮಾಡಿದ್ದರು. ಕರ್ನಾಟಕದ ವಿಚಾರದಲ್ಲಿ ಪಿಎಂ ನಿದ್ದೆ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದರು.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ