Breaking News

ಮಸೀದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ – ಭಟ್ಕಳದಲ್ಲಿ ಅಧಿಕಾರಿಗಳ ಎಡವಟ್ಟಿನಿಂದ ಸಮಸ್ಯೆ

Spread the love

ತ್ತರ ಕನ್ನಡ ಸಂಸದ ಮಸೀದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ ಬೆನ್ನಲ್ಲೆ, ಹಿಂದೂ ಮುಸ್ಲಿಂ ಕಾಳಗ ಆರಂಭ ಆಗಿದೆ. ಜಿಲ್ಲೆಯ ಭಟ್ಕಳದಲ್ಲಿ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗಿದೆ, ಅಧಿಕಾರಿಗಳ ಎಡವಟ್ಟಿನಿಂದ ಸಮಸ್ಯೆ ಉದ್ಭವಿಸುವ ಸಾಧ್ಯತೆ ಇದೆ.
ಹೀಗಾಗಿ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನ ನಿಯೋಜಿಸಲಾಗಿದೆ. ಬೋರ್ಡ್ ಅಳವಡಿಸಲು ಅಡ್ಡಿಪಡಿಸಿದ ಅಧಿಕಾರಿಗಳು ಸಂಘರ್ಷಕ್ಕೆ ಕಾರಣವಾಗಿದ್ದು, ಸ್ಥಳೀಯರ ಅಸಮಧಾನಕ್ಕೆ ಕಾರಣವಾಗಿದೆ.ಉತ್ತರ ಕನ್ನಡ ಸಂಸದ ಮಸೀದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ ಬೆನ್ನಲ್ಲೆ, ಹಿಂದೂ ಮುಸ್ಲಿಂ ಕಾಳಗ ಆರಂಭ ಆಗಿದೆ. ಜಿಲ್ಲೆಯ ಭಟ್ಕಳದಲ್ಲಿ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗಿದೆ, ಅಧಿಕಾರಿಗಳ ಎಡವಟ್ಟಿನಿಂದ ಸಮಸ್ಯೆ ಉದ್ಭವಿಸುವ ಸಾಧ್ಯತೆ ಇದೆ. ಹೀಗಾಗಿ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನ ನಿಯೋಜಿಸಲಾಗಿದೆ.

ಉತ್ತರಕನ್ನಡ ಜಿಲ್ಲೆಯ ಭಟ್ಕಳ ರಾಜ್ಯದ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಒಂದು. ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ದೇವಿನಗರದಲ್ಲಿ ಬೋರ್ಡ್ ಅಳವಡಿಸುವ ವಿಚಾರದಲ್ಲಿ ಗಲಾಟೆ ನಡೆದಿದೆ. ಪ್ರತಿ ವರ್ಷವೂ ಸಂಕ್ರಮಣ ಸಂದರ್ಭದಲ್ಲಿ ದೇವಿನಗರದ ನಾಮಫಲಕವನ್ನ ಹೊಸದಾಗಿ ಮಾಡಲಾಗುತ್ತೆ. ಈ ಬಾರಿಯೂ ಕೂಡ ಹೊಸ ನಾಮಫಲಕ ಅಳವಡಿಸಲು ಕಂಬವನ್ನ ನೆಡಲಾಗಿತ್ತು.

ಆದ್ರೆ ಇನ್ನೊಂದು ಕೋಮಿನ ನಾಗರಿಕರು ನೀಡಿದ ದೂರಿನ ಮೇರೆಗೆ ಪಟ್ಟಣ ಪಂಚಾಯತ್ ಅಧಿಕಾರಿಗಳು ಕಂಬವನ್ನ ತೆರವುಗೊಳಿಸಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ. ಕಂಬ ತೆರವುಗೊಳಿಸಿದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಮತ್ತು ಹಿಂದು ಸಂಘಟನೆ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಪಟ್ಟಣ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಬೋರ್ಡ್ ಅಳವಡಿಸಲು ಅಡ್ಡಿಪಡಿಸಿದ ಅಧಿಕಾರಿಗಳು ಸಂಘರ್ಷಕ್ಕೆ ಕಾರಣವಾಗಿದ್ದು, ಸ್ಥಳೀಯರ ಅಸಮಧಾನಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು

Spread the love ಹುಕ್ಕೇರಿ : ಗೋಕಾಕ ತಾಲೂಕಿನ ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಧಾರಾಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ