Breaking News

ರಾಜ್ಯಕ್ಕಾಗಿರುವ ಅನ್ಯಾಯಕ್ಕೆ ಉತ್ತರ ನೀಡಬೇಕಾದವರು ಮೋದಿಯವರೇ ಹೊರತು ಬಿಜೆಪಿಯ ಐಟಿ ಸೆಲ್ ಅಲ್ಲ!

Spread the love

ತೆರೆದ ಪುಸ್ತಕದಲ್ಲಿ ಕಾಣುವ ಈ ಅನ್ಯಾಯಗಳನ್ನು ಕಂಡು ಮೌನವಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕ್ರಿಯೆಯನ್ನು ಹೇಗೆ ವ್ಯಾಖ್ಯಾನಿಸಲಿ? ಉದ್ದೇಶಪೂರ್ವಕವಾದ ನಿರ್ಲಕ್ಷ್ಯ ಎನ್ನಲೇ? ಸಹಜವಾದ ನಿದ್ರಾ ಸ್ಥಿತಿ ಎನ್ನಲೇ? ಬೆಂಗಳೂರು: ಕರ್ನಾಟಕ ಮತ್ತು ಕನ್ನಡಿಗರಿಗೆ ಕೇಂದ್ರದ ಬಿಜೆಪಿ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳನ್ನು ಹೇಳುತ್ತಲೇ ಬಂದಿದ್ದೇನೆ.
ಇದಕ್ಕೆ ಉತ್ತರ ನೀಡಬೇಕಾಗಿರುವವರು ಪ್ರಧಾನಿ ನರೇಂದ್ರ ಮೋದಿಯವರೇ ಹೊರತು ಬಿಜೆಪಿಯ ಐಟಿ ಸೆಲ್ ಅಲ್ಲ. ಸನ್ಮಾನ್ಯ ಪ್ರಧಾನಿಯವರು ಒಪ್ಪಿ ದಿನ ಮತ್ತು ಸ್ಥಳವನ್ನು ನಿಗದಿಪಡಿಸಿದರೆ ಈ ಬಗ್ಗೆ ಸಾರ್ವಜನಿಕ ಚರ್ಚೆಗೆ ನಾನು ಸಿದ್ದನಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಾಡಿಗೆ ಬರಗಾಲ ಬಿದ್ದು ಆರು ತಿಂಗಳುಗಳಾಗಿವೆ. ಬರಪರಿಹಾರದ ಕೆಲಸಗಳಿಗಾಗಿ 18,177 ಕೋಟಿ ರೂಪಾಯಿ ನೀಡಲು ಮೂರು ತಿಂಗಳುಗಳಿಂದ ಒತ್ತಾಯಿಸುತ್ತಾ ಬಂದಿದ್ದೇವೆ.

ಪತ್ರ ಬರೆದಿದ್ದೇವೆ, ನಾನೇ ಖುದ್ದಾಗಿ ಹೋಗಿ ಪ್ರಧಾನಮಂತ್ರಿಯವರನ್ನು ಭೇಟಿಯಾಗಿ ನಮ್ಮ ರೈತರ ಕಷ್ಟಗಳನ್ನು ವಿವರಿಸಿದ್ದೇನೆ.. ಇಲ್ಲಿಯವರೆಗೆ ಒಂದು ಪೈಸೆ ಪರಿಹಾರ ಬಿಡುಗಡೆ ಮಾಡಿಲ್ಲ ಎಂದಿದ್ದಾರೆ. ಯುಪಿಎ ಸರ್ಕಾರದ 14ನೇ ಹಣಕಾಸು ಆಯೋಗವು ಕರ್ನಾಟಕಕ್ಕೆ ನಿಗದಿಪಡಿಸಿದ್ದ ಶೇ.4.72 ತೆರಿಗೆ ಪಾಲನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದ 15ನೇ ಹಣಕಾಸು ಆಯೋಗವು ಶೇ.3.64 ಕ್ಕೆ ಇಳಿಕೆ ಮಾಡಿ ವಂಚಿಸಲಾಗಿದೆ. ಇದರಿಂದ ಕನ್ನಡಿಗರು ಕಳೆದ 4 ವರ್ಷಗಳಲ್ಲಿ ಸುಮಾರು 45,000 ಕೋಟಿ ರೂಪಾಯಿಯಷ್ಟು ಬೆವರಗಳಿಕೆಯಿಂದ ಕಟ್ಟಿದ ತೆರಿಗೆ ಹಣವನ್ನು ಕಳೆದುಕೊಂಡಿದ್ದಾರೆ.

ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಸರ್ಕಾರದ ಸಹಭಾಗಿತ್ವದ ಯೋಜನೆಗಳಿಗೆ ನೀಡುತ್ತಿರುವ ಅನುದಾನವನ್ನು ವರ್ಷದಿಂದ ವರ್ಷಕ್ಕೆ ಕಡಿತಗೊಳಿಸಲಾಗುತ್ತಿದೆ. 2021-22ರ ಅವಧಿಯಲ್ಲಿ 20 ಸಾವಿರ ಕೋಟಿ ರೂಪಾಯಿ ಇದ್ದ ಅನುದಾನ, 2022-23ರಲ್ಲಿ 13 ಸಾವಿರ ಕೋಟಿ ರೂಪಾಯಿಗೆ ಇಳಿಕೆಯಾಗಿದೆ.


Spread the love

About Laxminews 24x7

Check Also

ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಅಧ್ಯಕ್ಷ ರವಿಕುಮಾರ್‌ ಕೊನೆಗೂ ರಾಜೀನಾಮೆ

Spread the loveಬೆಂಗಳೂರು, (ಸೆಪ್ಟೆಂಬರ್ 05): ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (Bhovi Development Corporation) ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ