Breaking News

ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಸಾವು, 20

Spread the love

ಆನೇಕಲ್, ಜನವರಿ 18: ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಮೃತಪಟ್ಟು 20 ಜನ ಗಾಯಗೊಂಡ ಘಟನೆ ಬೆಂಗಳೂರು (Bengaluru) ನಗರ ಜಿಲ್ಲೆ ಆನೇಕಲ್ (Anekal) ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಸಂಭವಿಸಿದೆ. ಮೃತರನ್ನು ಜಾರ್ಖಂಡ್​​ ಮೂಲದ ಮಿನರ್​ ಬಿಸ್ವಾಸ್​​, ಶಾಹೀದ್​ ಎಂದು ಗುರುತಿಸಲಾಗಿದೆ. ಗಾಯಾಳು ಕಾರ್ಮಿಕರನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಕಟ್ಟಡದ ಅವಶೇಷಗಳಡಿ ಇನ್ನೂ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ಇದೆ. ಎರಡನೇ ಅಂತಸ್ತಿನ ನಿರ್ಮಾಣದ ವೇಳೆ ಕಟ್ಟಡ ಕುಸಿದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.

ಚಿತ್ರದುರ್ಗ ಮದಕರಿಪುರ ಬಳಿ ಅಪಘಾತ; ಇಬ್ಬರು ಸಾವು

ಚಿತ್ರದುರ್ಗದ ಮದಕರಿಪುರ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಟ್ಯಾಂಕರ್ ಲಾರಿಗೆ ಕಾರ್ ಡಿಕ್ಕಿಯಾಗಿ ಸಂಭವಿಸಿದ ಭಿಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಚಿತ್ರದುರ್ಗ ತಾಲೂಕಿನ ಮದಕರಿಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಕಾರ್ ನಲ್ಲಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಬೆಂಗಳೂರು ಮೂಲದ ನಿರ್ಮಲ (55), ವಿನುತಾ (40) ಎಂದು ಗುರುತಿಸಲಾಗಿದೆ.

ಫಣಿರಾಜ್ (36), ರಶ್ಮಿ (32), ಯಶಸ್ (02) ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿಂದ ಕಾರಲ್ಲಿ ಹೊಸಪೇಟೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.


Spread the love

About Laxminews 24x7

Check Also

ರಾಜ್ಯೋತ್ಸವ ಮೆರವಣಿಗೆ ವೇಳೆ ಪೊಲೀಸರಿಂದ‌ ಲಾಠಿ ಏಟು.

Spread the love ರಾಜ್ಯೋತ್ಸವ ಮೆರವಣಿಗೆ ವೇಳೆ ಪೊಲೀಸರಿಂದ‌ ಲಾಠಿ ಏಟು. ತಲೆ ಭಾಗಕ್ಕೆ ಬಲವಾಗಿ ಪೆಟ್ಟು ಬಿದ್ದು ಬಿಮ್ಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ