ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ನಮೋ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಖರ್ಗೆ ಬಗ್ಗೆ ಹಗುರವಾಗಿ ಮಾತನಾಡಿರುವ ಸೂಲಿಬೆಲೆಯನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದೆ.
‘ಚಕ್ರವರ್ತಿ ಸೂಲಿಬೆಲೆ ಎನ್ನುವ ಸಮಾಜದ ಕೊಳಕು ಕ್ರಿಮಿಯೊಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ. ಬಾಡಿಗೆ ಭಾಷಣ ಮಾಡಿಕೊಂಡು ಬದುಕುವ ಪರಾವಲಂಬಿ ಜೀವಿಗಳಿಗೆ ಶೋಷಿತ ಸಮುದಾಯದ ನಾಯಕರೊಬ್ಬರು ಅತ್ಯುನ್ನತ ಸ್ಥಾನಕ್ಕೆ ಏರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ’ ಎಂದು ಕಾಂಗ್ರೆಸ್ ಕಿಡಿಕಾರಿದೆ.