ಧಾರವಾಡ: 2023 ನೇ ಸಾಲಿನ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಬಲದಂಡೆ ಕಾಲುವೆಯ ಮೂಲಕ ಧಾರವಾಡ ಜಿಲ್ಲೆಯಲ್ಲಿನ ನವಲಗುಂದ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲ್ಲೂಕುಗಳ ವಿವಿಧ ಗ್ರಾಮಗಳ ಕುಡಿಯುವ ನೀರಿನ ಕೆರೆಗಳಿಗೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ನೀರನ್ನು ತುಂಬಿಸಿಕೊಳ್ಳುವ ಸಲುವಾಗಿ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರು ಜನವರಿ 22 ರಂದು ಸಾಯಂಕಾಲ 6 ಗಂಟೆಯಿಂದ ಫೆಬ್ರವರಿ 1, 2024ರ ವರೆಗೆ ನೀರನ್ನು ಕಾಲುವೆಗೆ ಬಿಡಲು ಆದೇಶಿಸಿರುತ್ತಾರೆ.
ಬಿಡುಗಡೆಗೊಳಿಸಿದ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಿಡುಗಡೆ ಮಾಡಲಾಗಿದ್ದು, ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಸುವಂತೆ ಪ್ರಾದೇಶಿಕ ಆಯುಕ್ತರ ವಿನಂತಿಸಿದ್ದಾರೆ.
ಈ ಸಮಯದಲ್ಲಿ ಕಾಲುವೆಯ ಅಚ್ಚುಕಟ್ಟು ಪ್ರದೇಶದ ಸಾರ್ವಜನಿಕರು ಸದರ ನೀರನ್ನು ಕೃಷಿ ಹಾಗೂ ಇನ್ನಿತರೆ ಬೇರೆ ಯಾವುದೇ ಉದ್ದೇಶಕ್ಕೆ ಪಂಪಸೆಟ್‍ನಿಂದ ಹಾಗೂ ಇನ್ನಿತರೇ ಉಪಕರಣಗಳಿಂದ ಬಳಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಈ ಪ್ರದೇಶದಲ್ಲಿ ಈಗಾಗಲೇ ಸಿ.ಆರ್.ಪಿ.ಸಿ. 1973 ರ ಕಲಂ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ.ನಿಬರ್ಂಧವನ್ನು ಉಲ್ಲಂಘಿಸಿದ್ದು ಕಂಡುಬಂದಲ್ಲಿ ಅಂತಹ ಪಂಪಸೆಟ್ ಹಾಗೂ ಇತರೆ ಉಪಕರಣಗಳನ್ನು ಜಪ್ತಿ ಮಾಡಿಕೊಳ್ಳಲಾಗುವುದು ಹಾಗೂ ನಿಬರ್ಂಧವನ್ನು ಉಲ್ಲಂಘಿಸಿದವರ ಮೇಲೆ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಧಾರವಾಡ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.