Breaking News
Home / ರಾಜಕೀಯ / ಕೋಟಕ್ ಮಹೀಂದ್ರ ಬ್ಯಾಂಕ್‌, ಐಸಿಐಸಿಐ, ಯುಬಿಐ ಲಾಭ ಹೆಚ್ಚಳ

ಕೋಟಕ್ ಮಹೀಂದ್ರ ಬ್ಯಾಂಕ್‌, ಐಸಿಐಸಿಐ, ಯುಬಿಐ ಲಾಭ ಹೆಚ್ಚಳ

Spread the love

ಮುಂಬೈ: 2023-24ನೇ ಹಣಕಾಸು ವರ್ಷದ ಡಿಸೆಂಬರ್‌ ತ್ರೈಮಾಸಿಕದಲ್ಲಿ ಕೋಟಕ್ ಮಹೀಂದ್ರ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌ ಹಾಗೂ ಸರ್ಕಾರಿ ಸ್ವಾಮ್ಯದ ಯೂನಿಯನ್‌ ಬ್ಯಾಂಕ್‌ ಇಂಡಿಯಾದ ನಿವ್ವಳ ಲಾಭದಲ್ಲಿ ಏರಿಕೆಯಾಗಿದೆ.

ಕೋಟಕ್ ಮಹೀಂದ್ರ ಬ್ಯಾಂಕ್‌ನ ಲಾಭದಲ್ಲಿ ಶೇ 6.75ರಷ್ಟು ಏರಿಕೆಯಾಗಿದೆ.

2022-23ನೇ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್‌ ₹3,995 ಕೋಟಿ ಲಾಭಗಳಿಸಿತ್ತು. 2023-24ರ ಅವಧಿಯಲ್ಲಿ ₹4,264 ಕೋಟಿಗೆ ಏರಿಕೆಯಾಗಿದೆ.

ಡಿಸೆಂಬರ್‌ ತ್ರೈಮಾಸಿಕದಲ್ಲಿ ಒಟ್ಟು ವರಮಾನವು ₹10,947 ಕೋಟಿಯಿಂದ ₹14,096 ಕೋಟಿಗೆ ಏರಿಕೆ ಕಂಡಿದೆ. ನಿರ್ವಹಣಾ ವೆಚ್ಚವು ₹3,751 ಕೋಟಿಯಿಂದ ₹4,284 ಕೋಟಿಗೆ ಹೆಚ್ಚಳವಾಗಿದೆ ಎಂದು ಬ್ಯಾಂಕ್‌ ತಿಳಿಸಿದೆ.

ವಸೂಲಾಗದ ಸಾಲದ ಸರಾಸರಿ ಪ್ರಮಾಣವು (ಎನ್‌ಪಿಎ) ಸ್ಥಿರವಾಗಿದೆ. 2023ರ ಸೆಪ್ಟೆಂಬರ್‌ನಲ್ಲಿ ನಿವ್ವಳ ಎನ್‌ಪಿಎ ಶೇ 1.72ರಷ್ಟು ಇತ್ತು. ಈ ಅವಧಿಯಲ್ಲಿ ಶೇ 1.73ಕ್ಕೆ ಏರಿಕೆಯಾಗಿದೆ. ಭಾರತೀಯ ರಿಸರ್ವ್‌ ಬ್ಯಾಂಕ್‌ನ ಮಾರ್ಗಸೂಚಿ ಅನ್ವಯ ಈ ತ್ರೈಮಾಸಿಕದಲ್ಲಿ ₹190.13 ಕೋಟಿಯನ್ನು ನಿರ್ದಿಷ್ಟ ಉದ್ದೇಶಕ್ಕೆ ಸ್ಥಾಪಿಸಲಾಗುವ ಪರ್ಯಾಯ ಹೂಡಿಕೆ ನಿಧಿಯಲ್ಲಿ (ಎಐಎಫ್‌) ಹೂಡಿಕೆ ಮಾಡಲಾಗಿದೆ ಎಂದು ತಿಳಿಸಿದೆ.‌

ಐಸಿಐಸಿಐ ಬ್ಯಾಂಕ್‌ ಲಾಭ ವೃದ್ಧಿ

ಐಸಿಐಸಿಐ ಬ್ಯಾಂಕ್‌ನ ನಿವ್ವಳ ಲಾಭದಲ್ಲಿ ಶೇ 25.7ರಷ್ಟು ಹೆಚ್ಚಳವಾಗಿದೆ. ಹಿಂದಿನ ವರ್ಷದ ತ್ರೈಮಾಸಿಕದಲ್ಲಿ ಬ್ಯಾಂಕ್‌ ₹8,792.42 ಕೋಟಿ ಆದಾಯ ಗಳಿಸಿತ್ತು. 2023-24ರ ಅವಧಿಯಲ್ಲಿ ₹11,052 ಕೋಟಿಗೆ ಏರಿಕೆಯಾಗಿದೆ. ನಿವ್ವಳ ಬಡ್ಡಿ ವರಮಾನವು ಶೇ 13.4ರಷ್ಟು ಹೆಚ್ಚಾಗಿದೆ ಎಂದು ಬ್ಯಾಂಕ್‌ ತಿಳಿಸಿದೆ.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ