Breaking News

ಚಿತ್ರದುರ್ಗ: ಎಲ್​​ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತ

Spread the love

ಚಿತ್ರದುರ್ಗ, ಜನವರಿ 21: ಎಲ್​​ಪಿಜಿ ಸಿಲಿಂಡರ್ (Cylinder) ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಹೊಳಲ್ಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ನಡೆದಿದೆ. ಲಕ್ಷ್ಮಮ್ಮ (38) ಮೃತ ದುರ್ದೈವಿ. ರೇಣುಕಮ್ಮ ಮತ್ತು ರಚನಾ ಎಂಬುವರಿಗೆ ಗಾಯಗಳಾಗಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಮೇಶ್ ಎಂಬುವರ ಬೀದಿ ಬದಿ ಹೋಟೆಲ್​​ಗೆ ಬೆಂಕಿ ಬಿದ್ದಿತ್ತು. ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ, ಸುತ್ತಮುತ್ತಲಿದ್ದ ಮಹಿಳಾ ಕಾರ್ಮಿಕರು ಬೀದಿ ಬದಿ ಹೋಟೆಲ್​​ನತ್ತ ಧಾವಿಸಿದ್ದಾರೆ. ಈ ವೇಳೆ ಹೋಟೆಲ್​​ನಲ್ಲಿದ್ದ ಸಿಲಿಂಡರ್​ ಸ್ಪೋಟಗೊಂಡಿದೆ.

ಸಿಲಿಂಡರ್​ ಸ್ಪೋಟದಿಂದ ಸ್ಥಳದಲ್ಲಿದ್ದ ಮಹಿಳಾ ಕಾರ್ಮಿಕ ಲಕ್ಷ್ಮಮ್ಮ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಎಲ್​ಪಿಜಿ ಸಿಲಿಂಡರ್ ಸ್ಫೋಟಗೊಂಡು ಹೊತ್ತಿ ಉರಿದ ದಾಭಾ

ರಾಯಚೂರು: ಸಿಂಧನೂರು ಹೊರವಲಯದ ಕೆಎ-36 ಹೆಸರಿನ ದಾಭಾ ಕಂ ರೆಸ್ಟೋರೆಂಟ್​ನಲ್ಲಿ ಎಲ್​ಪಿಜಿ ಸಿಲಿಂಡರ್ ಸ್ಫೋಟಗೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಗ್ರಾಹಕರು ಹಾಗೂ ಸಿಬ್ಬಂದಿ ದಾಭಾದಿಂದ ಹೊರಗೆ ಓಡಿ ಬಂದಿದ್ದಾರೆ. ದಾಭಾದಲ್ಲಿನ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ