Breaking News

ಗದಗ: ಅಯೋಧ್ಯೆ ರಾಮ ಮಂದಿರದ ಫೋಟೋ ತಿರುಚಿ ಪೋಸ್ಟ್ ಮಾಡಿದ ಯುವಕ ಅರೆಸ್ಟ್

Spread the love

ಗದಗ, ಜ.22: ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಇಡೀ ಭಾರತ ಕಾತುರದಿಂದ ಕಾಯುತ್ತಿದೆ. ಪ್ರತಿ ಜಿಲ್ಲೆ, ರಾಜ್ಯಗಳಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಆದರೆ ಇಲ್ಲೊಬ್ಬ ಕಿಡಿಗೇಡಿ ರಾಮ ಮಂದಿರದ ಚಿತ್ರವನ್ನು ತಿರುಚಿ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿ ಜೈಲು ಸೇರಿದ್ದಾನೆ. ​ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ತಾಜುದ್ದೀನ್‌ ದಫೇದಾ‌ರ್ ಎಂಬ ಯುವಕನೊಬ್ಬ ಅಯೋಧ್ಯೆ ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾರಿಸಿರುವಂತೆ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.

 

ಅಯೋಧ್ಯೆ ರಾಮ ಮಂದಿರದಲ್ಲಿ ರಾಮನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭದಲ್ಲಿ ಇಂತಹ ಘಟನೆ ನಡೆದಿದೆ. ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾಕಿರುವ ಚಿತ್ರ ಫೇಸ್‌ಬುಕ್‌ನಲ್ಲಿ ಫೋಸ್ಟ್ ಮಾಡಲಾಗಿದೆ. ಸುದ್ಧಿ ತಿಳಿಯುತ್ತಿದ್ದಂತೆ ಹಿಂದೂಪರ ಸಂಘಟನೆಗಳ ಮುಖಂಡರು ಆಕ್ರೋಶ ಹೊರ ಹಾಕಿದ್ದು ಗಜೇಂದ್ರಗಡ ಪೊಲೀಸರು ತಾಜುದ್ದೀನ್‌ ದಫೇದಾ‌ರ್ ಎಂಬಾತನನ್ನು ಬಂಧಿಸಿದ್ದಾರೆ. ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬಜರಂಗದಳ ಸೇರಿ ವಿವಿಧ ಸಂಘಟನೆಗಳ ಕಾರ್ಯಕರ್ತರು ತಡರಾತ್ರಿ ಪೊಲೀಸ್ ಠಾಣೆಗೆ ದೌಡಾಯಿಸಿ ಯುವಕನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಯುವಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಪಿಎಸ್‌ಐ ಸೋಮನಗೌಡರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಆದೇಶ ನೀಡಿದೆ.

Spread the loveಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ