Breaking News

ಹಳೆ ವೈಷಮ್ಯ ಹಿನ್ನೆಲೆ ವಿಜಯಪುರದಲ್ಲಿ ಗುಂಡಿನ ದಾಳಿ: ಓರ್ವನಿಗೆ ಗಾಯ

Spread the love

ವಿಜಯಪುರ, ಜನವರಿ 22: ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ಕೊಲ್ಹಾರ (Kolhar) ತಾಲೂಕಿನ ರೋಣಿಹಾಳ ಗ್ರಾಮದಲ್ಲಿ ಕಂಟ್ರೀ ಪಿಸ್ತೂಲ್​ನಿಂದ ಗುಂಡಿನ ದಾಳಿ (Shoot Out) ಮಾಡಲಾಗಿದೆ.

ಗುಂಡಿನ ದಾಳಿಯಿಂದ ರಾಜು ನ್ಯಾಮಗೊಂಡ ಎಂಬುವರು ಗಾಯಗೊಂಡಿದ್ದಾರೆ. ಶಿವು ಜಗದಾಳೆ ಗುಂಡು ಹಾರಿಸಿದ ಆರೋಪಿ. ಘಟನೆಯಲ್ಲಿ ಗಾಯಗೊಂಡ ರಾಜು ನ್ಯಾಮಗೊಂಡ ಅವರನ್ನುವಿಜಯಪುರ(Vijayapura) ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರೂ ಸಂಬಂಧಿಕರಾಗಿದ್ದು ವೈಷಮ್ಯ ಹೊಂದಿದ್ದರು ಎನ್ನಲಾಗಿದೆ.

ಆರೋಪಿ ಶಿವು ಜಗದಾಳೆ ಸಂಬಂಧಿ ರಾಜು ನ್ಯಾಮಗೊಂಡ ಮೇಲೆ ಮೂರು ಗುಂಡು ಹಾರಿಸಿದ್ದಾನೆ ಎಂಬ ಮಾಹಿತಿ ದೊರೆತಿದೆ.

ಶಿವು ಜಗದಾಳೆ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕೊಲ್ಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ರೋಣಿಹಾಳ ಗ್ರಾಮದಲ್ಲಿ ಬೀಡುಬಿಟ್ಟಿದ್ದಾರೆ.


Spread the love

About Laxminews 24x7

Check Also

ಈಗ 41 ದೇಶಗಳಿಂದ ಇಂಧನ ಅಮದು, ಗಲ್ಫ್‌ನಲ್ಲಿರುವ ಪ್ರತಿಯೊಬ್ಬ ಭಾರತೀಯನ ಸುರಕ್ಷತೆ ನಮಗೆ ಮುಖ್ಯ: ಮೋದಿ

Spread the loveದೆಹಲಿ: ಈಗ ನಾವು 41 ದೇಶಗಳಿಂದ ಇಂಧನವನ್ನು ಆಮದು ಮಾಡಿಕೊಳ್ಳುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ