Breaking News

ರಾಮ ಮಂದಿರ ಮೆರವಣಿಗೆ ವೇಳೆ ವಿದ್ಯುತ್ ಅವಘಡ, 9 ಮಕ್ಕಳ ಸ್ಥಿತಿ ಗಂಭೀರ

Spread the love

ಅಮೇಥಿ : ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ ಸೋಮವಾರ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ಆಚರಿಸುವ ಮೆರವಣಿಗೆಯ ವೇಳೆ ವಿದ್ಯುತ್ ಸ್ಪರ್ಶದಿಂದ ಒಂಬತ್ತು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಜಿಲ್ಲೆಯ ಸಂಗ್ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪೂರ್ವಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಮೆರವಣಿಗೆಯ ಸಮಯದಲ್ಲಿ ಡಿಜೆಯನ್ನು ಹೊತ್ತ ಟ್ರಕ್ ಮೇಲೆ ಮಕ್ಕಳು ಸವಾರಿ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಅದರ ಮೇಲಿದ್ದ ಕೆಲವು ಧ್ವಜಗಳು ಹೈಟೆನ್ಷನ್ ತಂತಿಗೆ ಸಿಲುಕಿ ವಿದ್ಯುತ್ ಶಾಕ್ ಹೊಡೆದಿದೆ.

ಸದ್ಯ 9 ಮಕ್ಕಳ ಸ್ಥಿತಿ ಕೂಡ ಗಂಭೀರವಾಗಿದ್ದು, ಗಾಯಾಳುಗಳನ್ನು ಅಮೇಥಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ