ಅಯೋಧ್ಯೆ: ಸೋಮವಾರ ‘ಪ್ರಾಣ ಪ್ರತಿಷ್ಠಾ ವಿಧಿವಿಧಾನಗಳಿಗೆ ಚಾಲನೆ ನೀಡಿ, ರಾಮಲಲ್ಲಾ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ, ಸಮಾರಂಭಕ್ಕೆ ಹಾಜರಾಗುವ ಮೂಲಕ ಎಲ್ಲರ ಗಮನಸೆಳೆದರು. ಪ್ರತಿಷ್ಠಾಪನೆಗೊಂಡ ರಾಮಲಲ್ಲಾನ ವಿಗ್ರಹ ಚಿನ್ನ ಮತ್ತು ಪಚ್ಚೆ ಆಭರಣಗಳಲ್ಲಿ ಅಲಂಕರಿಸಲಾಗಿದ್ದು, ಕಳೆದ ವಾರ ದೇವಸ್ಥಾನದಲ್ಲಿ ವಿಗ್ರಹವನ್ನು ಇಡಲಾಗಿತ್ತು.
ದೇವರ ಮುಖ ಮತ್ತು ಕಣ್ಣನ್ನು ಮುಚ್ಚಲಾಗಿತ್ತು. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡುವ ಮುಖೇನ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
84 ಸೆಕೆಂಡುಗಳ ಮುಹೂರ್ತದಲ್ಲಿ ‘ಪ್ರಾಣ ಪ್ರತಿಷ್ಠೆ’ ನೆರವೇರಿಸಿದ ಪ್ರಧಾನಿ ಮೋದಿ ಜತೆಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಗವಂತ್ ಅವರು ಧಾರ್ಮಿಕ ವಿಧಿ ವಿಧಾನಗಳಲ್ಲಿ ಪಾಲ್ಗೊಂಡರು. ಅದ್ಧೂರಿ ಆಚರಣೆಯ ನಡುವೆ ಧಾರ್ಮಿಕ ವಿಧಿವಿಧಾನಗಳು ಪ್ರಾರಂಭವಾಗುವ ಕೆಲವು ನಿಮಿಷಗಳ ಮೊದಲು ಪ್ರಧಾನಿ ರಾಮಮಂದಿರಕ್ಕೆ ಭೇಟಿ ನೀಡಿದರು.
ಸಮಾರಂಭಕ್ಕೆ ಆಹ್ವಾನಿಸಲಾದ ಅಮಿತಾಬ್ ಬಚ್ಚನ್, ಅವರ ಮಗ ಅಭಿಷೇಕ್ ಬಚ್ಚನ್, ಸೂಪರ್ ಸ್ಟಾರ್‌ಗಳಾದ ರಣಬೀರ್ ಕಪೂರ್, ಆಲಿಯಾ ಭಟ್, ಕತ್ರಿನಾ ಕೈಫ್, ವಿಕ್ಕಿ ಕೌಶಲ್, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್, ಅನಿಲ್ ಕುಂಬ್ಳೆ, ಉದ್ಯಮಿಗಳಾದ ಮುಕೇಶ್ ಅಂಬಾನಿ, ಅವರ ಪತ್ನಿ ನೀತಾ ಅಂಬಾನಿ ಮತ್ತು ಮಗಳು ಇಶಾ ಅಂಬಾನಿ ಕೂಡ ಕಾರ್ಯಕ್ರಮಕ್ಕೆ ಆಗಮಿಸಿದ್ದರು.