ಬೆಂಗಳೂರು, ಜನವರಿ 22: ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚಿಸಿರುವ ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಲೋಕಸಭೆ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಇರುವಾಗಲೇ ಸೋಲು ಗೆಲುವು ಲೆಕ್ಕಾಚಾರ ಶುರುವಾಗಿದೆ.
28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಅದರಲ್ಲೂ ಈ ಬಾರಿ ಕಾಂಗ್ರೆಸ್ ಸಾಕಷ್ಟು ಸವಾಲಿನ ನಡುವೆಯೂ ಹೆಚ್ಚಿನ ಸ್ಥಾನಗಳನ್ನು ಕರ್ನಾಟಕದಲ್ಲಿ ಗೆಲ್ಲಲು ಪ್ರಯತ್ನ ನಡೆಸುತ್ತಿದೆ. ಕಳೆದ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ ಕೇವಲ ಒಂದು ಕ್ಷೇತ್ರದಲ್ಲಷ್ಟೇ ಗೆಲ್ಲಲು ಸಾಧ್ಯವಾಗಿರುವ ಕಾಂಗ್ರೆಸ್ ಈ ಬಾರಿ ಟಾರ್ಗೆಟ್ ಹೆಚ್ಚಿಸಿಕೊಂಡಿದೆ.
ಈ ನಿಟ್ಟಿನಲ್ಲಿ ಹೈಕಮಾಂಡ್ ಕೂಡಾ ರಾಜ್ಯ ಸಚಿವರಿಗೆ ಕೆಲವೊಂದು ಕ್ಷೇತ್ರಗಳ ಟಾಸ್ಕ್ ಕೊಟ್ಟಿದೆ. ಇನ್ನೂ ಯಾವ ಕ್ಷೇತ್ರದಲ್ಲಿ ಗೆಲುವು ಸುಲಭ ಹಾಗೂ ಯಾವ ಕ್ಷೇತ್ರ ಕಾಂಗ್ರೆಸ್ ಪಾಲಿಗೆ ಕಠಿಣವಾಗಿದೆ. ಲೋಕಸಭೆ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್ ಅಭ್ಯರ್ಥಿಗಳ್ಯಾರು? ಇಲ್ಲಿದೆ ಸಂಭವನೀಯ ಪಟ್ಟಿ ಈಗಾಗಲೇ ವಿಧಾನಸಭಾ ಚುಣಾವಣೆಯಲ್ಲಿ 135 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಿರುವ ಕಾಂಗ್ರೆಸ್ ಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಷ್ಟಕರವಾಗಿದೆ. ಹಾಗಾದ್ರೆ ಆ ಕ್ಷೇತ್ರಗಳು ಯಾವುವು?
ಇಲ್ಲಿದೆ ನೋಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರ ಬಿಜೆಪಿ ಭದ್ರಕೋಟೆ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಹಾಗೂ ಸಂಸದ ಬಿ ವೈ ರಾಘವೇಂದ್ರ ಅವರು ತಮ್ಮದೇ ಆದ ಹಿಡಿತವನ್ನ ಶಿವಮೊಗ್ಗ ಭಾಗದಲ್ಲಿ ಹೊಂದಿದ್ದಾರೆ. ಹೀಗಾಗಿ ಈ ಕ್ಷೇತ್ರವನ್ನ ಬಿಜೆಪಿ ಭದ್ರಕೋಟೆ ಎಂದರೇ ತಪ್ಪಾಗುವುದಿಲ್ಲ. 2019 ರಲ್ಲಿ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರು 7,28,902 ಮತಗಳನ್ನು ಪಡೆದುಕೊಂಡಿದ್ದರು. ಕಳೆದ ಚುನಾವಣೆಯಲ್ಲಿಲಿ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಕಣಕ್ಕಿಳಿದಿದ್ದರು. ಆದರೆ ಮಧು 5.06,212 ಮತಗಳನ್ನು ಪಡೆದುಕೊಂಡಿದ್ದರು. 2009 ರಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪತ್ರ ಬಿವೈ ರಾಘವೇಂದ್ರ ಇಲ್ಲಿ ಗೆಲವು ಸಾಧಿಸಿದ್ದರು, 2014 ಹಾಗೂ 2019 ರಲ್ಲೂ ರಾಘವೇಂದ್ರ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ನಿಂದ ಸೂಕ್ತ ಅಭ್ಯರ್ಥಿಯ ಕೊರತೆ ಎದುರಾಗಿದ್ದು, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಕಷ್ಟಸಾಧ್ಯವಾಗಿದೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಕರಾವಳಿ ಹಾಗೂ ಮಲೆನಾಡನ್ನು ಒಳಗೊಂಡು ಈ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲವಾಗಿದೆ. ಈ ಕ್ಷೇತ್ರದಲ್ಲಿ ಹಿಂದುತ್ವ ಚುನಾವಣೆಯಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತದೆ. 2019 ರಲ್ಲಿ ಶೋಭಾ ಕರಂದ್ಲಾಜೆ ಬಿಜೆಪಿಯಿಂದ ಸ್ಪರ್ಧಿಸಿ ಅಭೂತಪೂರ್ವ ಗೆಲುವು ಸಾಧಿಸಿದ್ದರು. ಇತ್ತ ಕಾಂಗ್ರೆಸ್ ನಿಂದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ವಿರುದ್ಧ ಸ್ಪರ್ಧೆಯಲ್ಲಿ 718916 ಮತಗಳನ್ನು ಪಡೆದುಕೊಂಡು 349599 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಳೆದ ಚುನಾವಣೆಯಲ್ಲಿ ಮೋದಿ ಫ್ಯಾಕ್ಟರ್ ಜೊತೆಗೆ ಬಿಜೆಪಿಯ ತಂತ್ರಗಾರಿಕೆಗಳು ಚುನಾವಣೆಯಲ್ಲಿ ಸಾಕಷ್ಟು ಪರಿಣಾಯ ಬೀರಿದೆ. ಹೀಗಾಗಿ ಉಡುಪಿ ಚಿಕ್ಕಮಗಳೂರು ಜಿಲ್ಲೆಯೂ ಕಾಂಗ್ರೆಸ್ ಪಾಲಿನ ಸವಾಲಿನ ಕ್ಷೇತ್ರದ ಪಟ್ಟಿಯಲ್ಲಿದೆ.
ಲೋಕಸಭಾ ಚುನಾವಣೆ: ಕಾಂಗ್ರೆಸ್ ಗೆ ಯಾವ ಕ್ಷೇತ್ರದಲ್ಲಿ ಗೆಲುವು ಸುಲಭ, ಯಾವ ಕ್ಷೇತ್ರಗಳು ಕಠಿಣ- ಇಲ್ಲಿವೆ ಸಂಪೂರ್ಣ ವಿವರ ಹಾಸನ ಲೋಕಸಭಾ ಕ್ಷೇತ್ರ ಹಾಸನ ಲೋಕಸಭಾ ಕ್ಷೇತ್ರ ಜೆಡಿಎಸ್ ಭದ್ರಕೋಟೆ. ಇಲ್ಲಿ ಸತತವಾಗಿ ಜೆಡಿಎಸ್ ಗೆದ್ದುಕೊಂಡು ಬಂದಿದೆ. ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ 1991 ರಲ್ಲಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. 1998,2004, 2009, 2014, 2019 ಸತತವಾಗಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಿಕೊಂಡು ಬಂದಿದೆ. ಕಳೆದ ಬಾರಿ ಪ್ರಜ್ವಲ್ ರೇವಣ್ಣ ಜಯಗಳಿಸಿದ್ದು, ಈ ಬಾರಿಯೂ ಪ್ರಜ್ವಲ್ ರೇವಣ್ಣ ಅವರು ಕಣಕ್ಕಿಳಿಯಲಿದ್ದಾರೆ. ಇತ್ತ ಕಾಂಗ್ರೆಸ್ ನಲ್ಲಿ ಸೂಕ್ತ ಅಭ್ಯರ್ಥಿಯ ಕೊರತೆ ಇದೆ.
ಹೀಗಾಗಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೇಳುವಷ್ಟಿಲ್ಲ. ಸದ್ಯ ಹಾಸನ ಕ್ಷೇತ್ರದ ಗೆಲುವು ಕೈ ನಾಯಕರಿಗೆ ಕಷ್ಟಕರವಾಗಲಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕ ಅನಂತ್ ಕುಮಾರ್ ಹೆಗಡೆ ಸರಣಿ ಗೆಲುವು ಸಾಧಿಸಿಕೊಂಡು ಬಂದಿದ್ದಾರೆ. ಕಳೆದ ಚುನಾವಣೆಯಲ್ಲಿ 786042 ಮತಗಳನ್ನು ಗಳಿಸಿಕೊಂಡರೆ, ಜೆಡಿಎಸ್ ಅಭ್ಯರ್ಥಿ ಆನಂದ್ ಅಸ್ನೋಟಿಕರ್ 306393 ಮತಗಳನ್ನು ಪಡೆದುಕೊಂಡಿದ್ದಾರೆ.
ಈ ಬಾರಿಯೂ ಉತ್ತರ ಕನ್ನಡ ಕ್ಷೇತ್ರದಿಂದ ಅನಂತ್ ಕುಮಾರ್ ಹೆಗಡೆ ಸ್ಪರ್ಧೆ ಮಾಡಲಿದ್ದು, ಕೈ ನಾಯಕರಿಗೆ ಈ ಕ್ಷೇತ್ರವನ್ನು ಗೆಲ್ಲುವುದು ಸುಲಭವಲ್ಲ ಎಂಬುದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎಂಟು ಅವಧಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸತತವಾಗಿ ಗೆಲುವು ಸಾಧಿಸುತ್ತಾ ಬಂದಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಹಿಂದುತ್ವ ಹಾಗೂ ಬಿಜೆಪಿಯ ಭದ್ರಕೋಟೆಯಾಗಿದ್ದು,
ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ನೆಲೆ ಇಲ್ಲದಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧನಂಜಯ ಕುಮಾರ್ ನಾಲ್ಕು ಅವಧಿಯಲ್ಲಿ ಗೆದ್ದರೆ, ಡಿವಿ ಸದಾನಂದ ಗೌಡ 1 ಬಾರಿ ಗೆಲುವು ಸಾಧಿಸಿದ್ದಾರೆ. ಅಲ್ಲದೇ ನಳಿನ್ ಕುಮಾರ್ ಕಟೀಲ್ ಕಳೆದ ಮೂರು ಅವಧಿಯಲ್ಲಿ ಸರಣಿ ಗೆಲುವು ಸಾಧಿಸಿದ್ದಾರೆ. ಈ ಬಾರಿಯೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನಳಿನ್ ಕುಮಾರ್ ಕಟೀಲ್ ಸ್ಪರ್ಧೆ ನಡೆಸುವ ಸಾಧ್ಯತೆ ದಟ್ಟವಾಗಿದೆ.
ಇನ್ನೂ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನಲ್ಲಿ ಸೂಕ್ತ ಅಭ್ಯರ್ಥಿಗಳ ಕೊರತೆ ಹಾಗೂ ಸ್ಥಳೀಯ ನಾಯಕರುಗಳ ನಡುವಿನ ಭಿನ್ನಾಭಿಪ್ರಾಯವೂ ಹೆಚ್ಚಾಗಿದ್ದು, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವುದು ಸುಲಭದ ಮಾತಲ್ಲ ಎನ್ನಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆ. 1991 ರಿಂದ 2019 ರವರೆಗೆ ಬಿಜೆಪಿ ಇಲ್ಲಿ ಸತತವಾಗಿ ಗೆಲುವು ಸಾಧಿಸುತ್ತಾ ಬಂದಿದೆ. ಬಿಜೆಪಿಯಿಂದ ಈ ಕ್ಷೇತ್ರದಲ್ಲಿ ಯಾರೇ ಸ್ಪರ್ಧೆ ಮಾಡಿದರು ಗೆಲುವು ಬಿಜೆಪಿ ಪಕ್ಷದ್ದೇ ಆಗಿದೆ.
ಅನಂತ್ ಕುಮಾರ್ ಅವರ ನಿಧನದ ಬಳಿಕ 2019 ರ ಲೋಕಸಭಾ ಚುನಾವಣೆಯಲ್ಲಿ ತೇಜಸ್ವಿ ಸೂರ್ಯ ಬಿಜೆಪಿ ಅಭ್ಯರ್ಥಿಯಾಗಿ ನಿಂತು ಗೆಲುವು ಸಾಧಿಸಿದರು.ಈ ಬಾರೀ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರನ್ನ ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ ಎನ್ನುವ ಮಾತುಗಳು ಕೇಳಿ ಬಂದಿದ್ದು, ಈ ಬಾರೀಯೂ ಗೆಲುವು ಬಿಜೆಪಿ ಪಕ್ಷದ ಪಾಲಾಗಲಿದೆ ಎನ್ನುವ ಮಾತುಗಳು ಕೇಳಿ ಬಂದಿವೆ.
ಬೀದರ್ ಲೋಕಸಭಾ ಕ್ಷೇತ್ರ ಬೀದರ್ ಕ್ಷೇತ್ರದಲ್ಲಿ 1977 ರಿಂದ 1989 ರವರೆ ಕಾಂಗ್ರೆಸ್ ಗೆದ್ದರೂ, ಬಳಿಕ 1991 ರಿಂದ 2004 ರವರೆಗೆ ಸತತವಾಗಿ ಬಿಜೆಪಿ ಗೆಲುವು ಸಾಧಿಸಿದೆ. 2014, ಹಾಗೂ 2019 ರಲ್ಲಿ ಬಿಜೆಪಿ ಭಗವಂತ ಕೂಬಾ ಗೆಲುವು ಸಾಧಿಸಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಭಗವಂತ ಖೂಬಾ 5,85,471 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದು, ಈ ಬಾರಿಯೂ ಈ ಕ್ಷೇತ್ರವನ್ನ ಕಾಂಗ್ರೆಸ್ ಗೆಲುವುದು ಕಷ್ಟಕರವಾಗಿದೆ.
ಧಾರವಾಡ ಲೋಕಸಭೆ ಕ್ಷೇತ್ರ ಧಾರವಾಡ ಲೋಕಸಭಾ ಕ್ಷೇತ್ರವೂ ಬಿಜೆಪಿ ಪ್ರಬಲ ಕೋಟೆಯಾಗಿದೆ. 2009, 2014 ಹಾಗೂ 2019 ರಲ್ಲಿ ಬಿಜೆಪಿಯ ಪ್ರಹ್ಲಾದ್ ಜೋಶಿ ಇಲ್ಲಿ ಸತತವಾಗಿ ಗೆಲುವು ಸಾಧಿಸುತ್ತಾ ಬಂದಿದ್ದಾರೆ. 2019, 2014 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ಪ್ರಹ್ಲಾದ್ ಜೋಶಿ ವಿರುದ್ಧ ಸ್ಪರ್ಧಿಸಿ ಸೋಲನ್ನು ಕಂಡಿದ್ದಾರೆ. ಈ ಬಾರಿಯೂ ಧಾರವಾಡ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಬಿಜೆಪಿ ಸಕಲ ರೀತಿಯಲ್ಲಿ ಸಜ್ಜಾಗಿದೆ. ಇತ್ತ ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನ ಕಣಕ್ಕಿಳಿಸುವ ಕುರಿತು ಚಿಂತನೆ ನಡೆಸಿದ್ದು, ಕಾಂಗ್ರೆಸ್ ಈ ಕ್ಷೇತ್ರ ಸವಾಲಿನದ್ದಾಗಿದೆ.