Breaking News
Home / ರಾಜಕೀಯ / ಸಿದ್ದರಾಮಯ್ಯನವರೇ ನಿಮ್ಮ ಪರಿಸ್ಥಿತಿಯ ಬಗ್ಗೆ ನನಗೆ ಕನಿಕರವಿದೆ, ಇನ್ನಾದರೂ ರಾಮನಿಗೆ ಶರಣಾಗಿ’

ಸಿದ್ದರಾಮಯ್ಯನವರೇ ನಿಮ್ಮ ಪರಿಸ್ಥಿತಿಯ ಬಗ್ಗೆ ನನಗೆ ಕನಿಕರವಿದೆ, ಇನ್ನಾದರೂ ರಾಮನಿಗೆ ಶರಣಾಗಿ’

Spread the love

ಅಂತೂ ಇಂತೂ ತಮ್ಮ ಬಾಯಲ್ಲೂ ರಾಮ ನಾಮ ಹೊರಡುತ್ತಿದೆ. ತೋರಿಕೆಗೊ, ಜನಮೆಚ್ಚುಗೆಗೊ ಅಥವಾ ಸಮಾಜದ ಅಂಜಿಕೆಗೋ, ಒಟ್ಟಿನಲ್ಲಿ ನಿನ್ನೆ ತಾವೂ ಒಂದು ದೇವಸ್ಥಾನಕ್ಕೆ ಹೋಗಿದ್ದೀರಿ. ಇದು ಸಂತೋಷದ ವಿಷಯ. ಬೆಂಗಳೂರು: ಅಂತೂ ಇಂತೂ ತಮ್ಮ ಬಾಯಲ್ಲೂ ರಾಮ ನಾಮ ಹೊರಡುತ್ತಿದೆ.
ತೋರಿಕೆಗೊ, ಜನಮೆಚ್ಚುಗೆಗೊ ಅಥವಾ ಸಮಾಜದ ಅಂಜಿಕೆಗೋ, ಒಟ್ಟಿನಲ್ಲಿ ನಿನ್ನೆ ತಾವೂ ಒಂದು ದೇವಸ್ಥಾನಕ್ಕೆ ಹೋಗಿದ್ದೀರಿ. ಇದು ಸಂತೋಷದ ವಿಷಯ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಆರ್. ಅಶೋಕ್ ಹರಿಹಾಯ್ದಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಿಮ್ಮ ಕಾಂಗ್ರೆಸ್ ಪಕ್ಷದ ಒಡೆದು ಆಳುವ ನೀತಿಯನ್ನ ರಾಮನ ವಿಷಯದಲ್ಲೂ ವಿಸ್ತರಿಸುವ ಪಾಪ ಕಟ್ಟಿಕೊಳ್ಳಬೇಡಿ.

ನೀವು ಮಹಾತ್ಮ ಗಾಂಧಿಯವರು ಹೇಳಿದ ರಾಮನ ಭಕ್ತರು ಅಂತ ಹೇಳಿದ್ದೀರಿ. ಮಹಾತ್ಮ ಗಾಂಧಿಯವರು ಗೋಹತ್ಯೆ ನಿಷೇಧದ ಅತ್ಯಂತ ದೊಡ್ಡ ಪ್ರತಿಪಾದಕರಾಗಿದ್ದರು. ಆದರೆ ತಾವು ಗೋಹತ್ಯೆಯ ಪರ. ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಕ್ಷವನ್ನ ವಿಸರ್ಜನೆ ಮಾಡಿ ಅಂತ ಗಾಂಧೀಜಿ ಹೇಳಿದ್ದರು.

ಆದರೆ ತಾವುಗಳು ಕಾಂಗ್ರೆಸ್ ಪಕ್ಷವನ್ನ ಒಂದು ಕುಟುಂಬದ ಜಹಗೀರು ಮಾಡಿಕೊಟ್ಟುಬಿಟ್ಟಿದ್ದೀರಿ. ಇದೇನಾ ತಮ್ಮ ಗಾಂಧೀವಾದ? ಎಂದು ಪ್ರಶ್ನಿಸಿದ್ದಾರೆ. ರಾಮ ಸತ್ಯವಂತ.

ಕೊಟ್ಟ ಮಾತಿಗೆ ಎಂದೂ ತಪ್ಪದ ವ್ಯಕ್ತಿತ್ವ. ಆದರೆ ತಾವು ಮಾಡಿದ್ದೇನು? ಮಾಡುತ್ತಿರುವುದೇನು? ತಮ್ಮ ಮೊದಲ ಅವಧಿಯಲ್ಲಿ ಜನತೆಗೆ ಕೊಟ್ಟಿದ್ದ ಭರವಸೆಗಳಲ್ಲಿ ಅರ್ಧ ಭಾಗವೂ ಈಡೇರಿಸಲಿಲ್ಲ.

ಅದರ ಮೇಲೆ ನುಡಿದಂತೆ ನಡೆದ ಸರ್ಕಾರ ಎಂಬ ಮತ್ತೊಂದು ಸುಳ್ಳು. ಈಗ ಎರಡನೇ ಅವಧಿಯಲ್ಲಿ ತಾವು ಮಾಡುತ್ತಿರುವುದೇನು? ಎಲ್ಲರಿಗೂ 200 ಯೂನಿಟ್ ಕರೆಂಟ್ ಉಚಿತ ಅಂತ ಸುಳ್ಳು ಭರವಸೆ ನೀಡಿ ಕಡೆಗೆ ಸರಾಸರಿ ಎಂದು ವರಸೆ ಬದಲಿಸಿದ್ದೀರಿ. 10 ಕೆಜಿ ಅಕ್ಕಿ ನೀಡುತ್ತೇನೆ ಎಂದು ಹೇಳಿ ಈಗ ಮಾತು ತಪ್ಪಿದ್ದೀರಿ.

ರಾಜ್ಯದ ಎಲ್ಲಾ ನಿರುದ್ಯೋಗಿ ಪದವೀಧರರು, ಡಿಪ್ಲೋಮಾ ಪದವೀಧರರಿಗೆ ಯುವನಿಧಿ ಗ್ಯಾರೆಂಟಿ ಅಂತ ಸುಳ್ಳು ಹೇಳಿ ಈಗ ಕಂಡೀಷನ್ ಮೇಲೆ ಕಂಡೀಷನ್ ಹಾಕಿ ಕಡೆಗೆ 3,000 ಯುವಕರು ಮಾತ್ರ ಅರ್ಹರು ಎಂದು ಯುವಕರಿಗೆ ಟೋಪಿ ಹಾಕಿದ್ದೀರಿ ಎಂದು ತಪರಾಕಿ ಹಾಕಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ