Breaking News

ಗೋಕರ್ಣ ಮಹಾಬಲೇಶ್ವರ ದೇಗುಲ ಆಡಳಿ ನಿರ್ವಹಣೆ ವಿವಾದ: ರಾಜ್ಯ ಸರ್ಕಾರ ಆದೇಶ ರದ್ದುಗೊಳಿಸಿದ ಹೈಕೋರ್ಟ್

Spread the love

ಬೆಂಗಳೂರು): ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನದ ಆಡಳಿತ ನಿರ್ವಹಣೆಗಾಗಿ ಸುಪ್ರೀಂ ಕೋರ್ಟ್ ಆದೇಶದ ಅನುಸಾರ ನಾಮ ನಿರ್ದೇಶನಗೊಂಡಿದ್ದ ಇಬ್ಬರು ಉಪಾಧಿವಂತರು ಮತ್ತು ಇಬ್ಬರು ವಿದ್ಯಾಂಸದರನ್ನು ಬದಲಾಯಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್​ ರದ್ದುಪಡಿಸಿದೆ. ಈ ಸಂಬಂಧ ರಾಮಚಂದ್ರಾಪುರ ಮಠ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆ ಮಾಡಿದ್ದ ಹೈಕೋರ್ಟ್​, 2023ರ ಆಗಸ್ಟ್​ 22ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಮಧ್ಯಂತರ ತಡೆ ನೀಡಿತ್ತು. ಆದ್ರೆ, ಇಂದು (ಜನವರಿ 22) ಸರ್ಕಾರದ ಕ್ರಮ ರದ್ದುಪಡಿಸಿ‌ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಆದೇಶ ಹೊರಡಿಸಿದೆ.

ಗೋಕರ್ಣಶ್ರೀ ಮಹಾಬಲೇಶ್ವರ ದೇಗುಲದ ಆಡಳಿತ ನಿರ್ವಹಣೆಗಾಗಿ ಸುಪ್ರೀಂಕೋರ್ಟ್‌ ಆದೇಶಾನುಸಾರ ನೇಮಕವಾಗಿದ್ದರು. ಆದ್ರೆ, ರಾಜ್ಯ ಸರ್ಕಾರ ಬದಲಾವಣೆ ಮಾಡಿ 2023ರ ಜುಲೈ 12ರಂದು ಆದೇಶಿಸಿತ್ತು. ಹೊಸ ಸದಸ್ಯರ ನೇಮಕಾತಿಗೆ ಸರ್ಕಾರಕ್ಕೆ‌ ಅಧಿಕಾರವಿಲ್ಲವೆಂದು ಸರ್ಕಾರದ ಕ್ರಮ ಪ್ರಶ್ನಿಸಿ ರಾಮಚಂದ್ರಾಪುರ ಮಠ ಅರ್ಜಿ ಸಲ್ಲಿಸಿತ್ತು. ಇದೀಗ ಹೈಕೋರ್ಟ್, ಗೋಕರ್ಣಶ್ರೀ ಮಹಾಬಲೇಶ್ವರ ದೇಗುಲದ ಉಪಾಧಿವಂತರ ಬದಲಾವಣೆ ರದ್ದುಗೊಳಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ