Breaking News

ಹಿಂಸಾಚಾರಕ್ಕೆ ಪ್ರಚೋದನೆ ಆರೋಪ: ರಾಹುಲ್​ ಗಾಂಧಿ ವಿರುದ್ಧ ದೂರು ದಾಖಲ

Spread the love

ಗುವಾಹಟಿ: ಭಾರತ್​​ ಜೋಡೋ ನ್ಯಾಯ ಯಾತ್ರೆಯ ವೇಳೆ ಹಿಂಸಾಚಾರ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಸಂಸದ ರಾಹುಲ್​ ಗಾಂಧಿ ಮತ್ತು ಇತರೆ ಕಾಂಗ್ರೆಸ್​ ನಾಯಕರ ವಿರುದ್ಧ ಅಸ್ಸಾಂ ಪೊಲೀಸರು ದೂರು ದಾಖಲಿಸಿದ್ದಾರೆ. ಈ ವಿಚಾರವನ್ನು ಸ್ವತಃ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ಶರ್ಮ ತಮ್ಮ ಎಕ್ಸ್​ ಖಾತೆಯ ಮೂಲಕ ತಿಳಿಸಿದ್ದಾರೆ.

 

ಪೊಲೀಸ್​ ಬಲವನ್ನು ಬಳಸಿಕೊಂಡು ಭಾರತ್​ ಜೋಡೋ ಯಾತ್ರೆಯನ್ನು ಹತ್ತಿಕ್ಕುವ ಕೆಲಸವನ್ನು ಅಸ್ಸಾಂ ಸರ್ಕಾರ ಮಾಡುತ್ತಿದೆ ಎಂಬುದು ಕಾಂಗ್ರೆಸ್​ ಆರೋಪ. ಆದರೆ, ಕಾಂಗ್ರೆಸ್​ ವಿನಾಕಾರಣ ಗೊಂದಲ ಸೃಷ್ಟಿ ಮಾಡಿ, ಹಿಂಸಾಚಾರ ಸೃಷ್ಟಿಸುತ್ತಿದೆ ಎಂಬುದು ಆಡಳಿತಾರೂಢ ಬಿಜೆಪಿ ಆರೋಪ. ಅಸ್ಸಾಂ ಸರ್ಕಾರದ ವಿರುದ್ಧ ನಿನ್ನೆ ಕಾಂಗ್ರೆಸ್​ ಧರಣಿ ಸಹ ನಡೆಸಿದೆ. ರಾಹುಲ್​ ಗಾಂಧಿ ಜನಸಮೂಹವನ್ನು ಪ್ರಚೋದಿಸುತ್ತಿದ್ದಾರೆ, ಅವರ ವಿರುದ್ಧ ದೂರು ದಾಖಲಿಸುವಂತೆ ಹಿಮಂತ್​ ಬಿಸ್ವಾ, ಅಸ್ಸಾಂ ಪೊಲೀಸರಿಗೆ ನಿರ್ದೇಶನ ನೀಡಿದ ಬೆನ್ನಲ್ಲೇ ಉಭಯ ನಾಯಕರು ಎಕ್ಸ್​ ಖಾತೆಯಲ್ಲಿ ಆರೋಪ-ಪ್ರತ್ಯಾರೋಪಗಳನ್ನು ಮಾಡುವ ಮೂಲಕ ಪರಸ್ಪರ ಕಿತ್ತಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಅಡಿಕೆ ಸಾಗಿಸುತ್ತಿದ್ದ VRL ಲಾರಿ ತೋಟಕ್ಕೆ ಉರುಳಿ ಸಂಪೂರ್ಣ ಜಖಂ!

Spread the loveಶಿರಸಿ:ಶಿರಸಿಯಿಂದ ಹುಬ್ಬಳ್ಳಿಗೆ ಅಡಿಕೆ ಸಾಗಿಸುತ್ತಿದ್ದ VRL ಸಂಸ್ಥೆಗೆ ಸೇರಿದ ಲಾರಿಯೊಂದು ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ಕಳೆದುಕೊಂಡು ರಸ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ