Breaking News

ಇಂಡಿಯಾ ಒಕ್ಕೂಟ ಹೆಚ್ಚು ದಿನ ಉಳಿಯುವುದಿಲ್ಲ: ಬೊಮ್ಮಾಯಿ

Spread the love

ಬೆಂಗಳೂರು: ಕಾಂಗ್ರೆಸ್ (congress) ನೇತೃತ್ವದ ಇಂಡಿಯಾ (INDIA) ಒಕ್ಕೂಟ ಮುಂದಿನ ದಿನಗಳಲ್ಲಿ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನಲ್ಲಿ (bengaluru) ಬುಧವಾರ ಮಾತನಾಡಿದ ಅವರು, ಈಗಾಗಲೇ ಇಂಡಿಯಾ ಒಕ್ಕೂಟದಿಂದ ಪಶ್ಚಿಮ ಬಂಗಾಳ (west bengal) ಮುಖ್ಯಮಂತ್ರಿ (cm) ಮಮತಾ ಬ್ಯಾನರ್ಜಿ (Mamata Banerjee), ಎನ್‌ಸಿಪಿ (NCP) ಮುಖ್ಯಸ್ಥ ಶರದ್‌ ಪವಾರ್ (sharad Pawar), ಬಿಹಾರ (bihar) ಸಿಎಂ ನಿತೀಶ್ ಕುಮಾರ್ (nitish kumar) ಒಂದು ಹೆಜ್ಜೆ ಹೊರಗೆ ಇಟ್ಟಿದ್ದಾರೆ.

ಹೀಗಾಗಿ ಮುಂದಿನ ದಿನಗಳಲ್ಲಿ ಇಂಡಿಯಾ ಒಕ್ಕೂಟ ಛಿದ್ರವಾಗಲಿದೆ ಎಂದರು.

ಕಾಂಗ್ರೆಸ್‌ ನವರಿಂದ ಬೇಸೆತ್ತು ಅವರು ಇಂಡಿಯಾ ಒಕ್ಕೂಟದಿಂದ ಹೊರಗೆ ಬಂದಿದ್ದಾರೆ. ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಈ ಒಕ್ಕೂಟ ಇರುವುದಿಲ್ಲ ಎಂದು ತಿಳಿಸಿದರು.

ಲೋಕಸಭಾ ಚುನಾವಣೆ ಬಗ್ಗೆ ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಬರಲಿದೆ. ಕರ್ನಾಟಕ ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡಿನಲ್ಲೂ ಬಿಜೆಪಿಗೆ ಹೆಚ್ಚಿನ ಸ್ಥಾನ ಸಿಗುವ ನಿರೀಕ್ಷೆ ಇದೆ ಎಂದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ